ಭ್ರಷ್ಟಾಚಾರ ಆರೋಪವಿದ್ದರೆ ರಾಜಕೀಯ ನಿವೃತ್ತಿ: ಸಿಎಂ
ನನ್ನ ರಾಜಕೀಯ ಜೀವನದಲ್ಲಿ ಎಂದು ಭ್ರಷ್ಟಾಚಾರ ಮಾಡಿಲ್ಲ, ಮುಂದೆಯೂ ಮಾಡೋಲ್ಲ ಹಾಗೊಂದು ಪಕ್ಷ ಭ್ರಷ್ಟಾಚಾರ ಆರೋಪವಿದ್ದರೆ ರಾಜಕೀಯ ನಿವೃತ್ತಿ ...
ಮೈಸೂರು: ನನ್ನ ರಾಜಕೀಯ ಜೀವನದಲ್ಲಿ ಎಂದು ಭ್ರಷ್ಟಾಚಾರ ಮಾಡಿಲ್ಲ, ಮುಂದೆಯೂ ಮಾಡೋಲ್ಲ ಹಾಗೊಂದು ಪಕ್ಷ ಭ್ರಷ್ಟಾಚಾರ ಆರೋಪವಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರದ ಸಭೆಯ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನ್ನ ರಾಜಕೀಯ ಜೀವನದಲ್ಲಿ ಎಂದೂ ಭ್ರಷ್ಟಾಚಾರ ಮಾಡಿಲ್ಲ ಮುಂದೆಯೂ ಮಾಡಲ್ಲ. ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪವಿದ್ದರೆ ರಾಜಕೀಯವಾಗಿ ನಿವೃತ್ತಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದ ಸಿದ್ದು, ಜೆಡಿಎಸ್ಗೆ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ. ಅಧಿಕಾರಕ್ಕೆ ಬರಬೇಕಾದರೆ ಯಾವುದಾದರೊಂದು ರಾಷ್ಟ್ರೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೇ ವಿನಃ ಬೇರೆ ದಾರಿ ಇಲ್ಲ ಎಂದು ವ್ಯಂಗ್ಯವಾಡಿದರು.
ರಾಜ್ಯ ಚುನಾವಣೆ ಸಂಬಂಧ ಮೇ 5ರಂದು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಬೇಕಿದ್ದ ಚುನಾವಣೆ ಬಿಜೆಪಿ ಅಭ್ಯರ್ಥಿ ನಿಧನ ಹಿನ್ನಲೆಯಲ್ಲಿ ಮೇ 28ಕ್ಕೆ ಮುಂದೂಡಲಾಗಿತ್ತು. ಈ ಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಇದೀಗಾ ಕೆಸರೆರೆಚಾಟದಲ್ಲಿ ತೊಡಗಿಕೊಂಡಿವೆ.
ಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ಪಕ್ಷದ ಸಾರಥ್ಯ ವಹಿಸಿರುವ ಸಿದ್ದರಾಮಯ್ಯ ಅವರಿಗೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದ್ದರೆ, ವಿರೋಧ ಪಕ್ಷ ಸ್ಥಾನಕ್ಕೆ ಹಪಾಹಪಿಸುತ್ತಿರುವ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ.