ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶ್ರೀನಿವಾಸನ್ ಅಮಾನತಿಗೆ ಬಿಸಿಸಿಐ ಚಿಂತನೆ

ಐಪಿಎಲ್ ಬೆಟ್ಟಿಂಗ್ ಪ್ರಕರಣ ಸಂಬಂಧ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಹಾಗೂ ಅಳಿಯ ಗುರುನಾಥ್ ಮೇಯಪ್ಪನ್...

Lingaraj Badiger
Updated On : 25 May 2013, 1:07 am

ಮುಂಬೈ: ಐಪಿಎಲ್ ಬೆಟ್ಟಿಂಗ್ ಪ್ರಕರಣ ಸಂಬಂಧ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಹಾಗೂ ಅಳಿಯ ಗುರುನಾಥ್ ಮೇಯಪ್ಪನ್ ಬಂಧನವಾಗುತ್ತಿದ್ದಂತೆ ಅತ್ತ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಕುರ್ಚಿ ಅಲ್ಲಾಡತೊಡಗಿದೆ.

ಪ್ರಕರಣ ಸಂಬಂಧ ಶ್ರೀನಿವಾಸನ್ ಅವರಿಂದ ರಾಜಿನಾಮೆ ಪಡೆಯಲು ಬಿಸಿಸಿಐ ನಿರ್ಧರಿಸಿದ್ದು, ಒಂದು ವೇಳೆ ಅವರು ರಾಜಿನಾಮೆ ನೀಡದಿದ್ದರೆ ಹುದ್ದೆಯಿಂದ ಅಮಾನತುಗೊಳಿಸುವ ಬಗ್ಗೆ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ. ಅಲ್ಲದೆ ಶ್ರೀನಿವಾಸ್ ಅವರಿಂದ ತೆರವಾಗುವ ಸ್ಥಾನಕ್ಕೆ ಶಶಾಂಕ್ ಮನೋಹರ್ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಿಸಿಸಿಐ ಉನ್ನತ ಅಧಿಕಾರಿಗಳ ಪ್ರಕಾರ, ಮಧ್ಯಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಮನೋಹರ್ ಅವರು ಒಪ್ಪಿಕೊಂಡಿದ್ದು, ನೂತನ ಅಧ್ಯಕ್ಷರು ಆಯ್ಕೆಯಾಗುವವರೆಗೆ ಅವರು ಬಿಸಿಸಿಐ ಮುಖ್ಯಸ್ಥರಾಗಿ ಮುಂದುವರೆಯಲಿದ್ದಾರೆ ಮತ್ತು ಈ ಸಂಬಂಧ ಈಗಾಗಲೇ ಬಿಸಿಸಿಐನ ನಾಲ್ವರು ಹಿರಿಯ ಅಧಿಕಾರಿಗಳು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ನಡುವೆ ತಾವು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ಅಗತ್ಯ ಇಲ್ಲ ಎಂದು ಶ್ರೀನಿವಾಸನ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement