ಸಚಿವರಾಗಿ ಎಸ್.ಆರ್.ಪಾಟೀಲ್ ಪ್ರಮಾಣ
ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟು ಸಚಿವ ಸ್ಥಾನಕ್ಕೆ ಪ್ರಬಲ ಲಾಭಿ ನಡೆಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ...
ಬೆಂಗಳೂರು: ಕಳೆದ ಕೆಲ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟು ಸಚಿವ ಸ್ಥಾನಕ್ಕೆ ಪ್ರಬಲ ಲಾಭಿ ನಡೆಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಎಸ್.ಆರ್.ಪಾಟೀಲ್ ಅವರು ಶನಿವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಳಗ್ಗೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಾಟೀಲ್ ಅವರು ತಮ್ಮ ತಾಯಿಯ ಹೆಸರಲಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಪಾಟೀಲ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಬಳಿ ಇರುವ ಹೆಚ್ಚುವರಿ ಖಾತೆಗಳ ಪೈಕಿ ಒಂದನ್ನು ಬಿಟ್ಟುಕೊಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.