ತಪ್ಪಿತಸ್ಥರ ವಿರುದ್ಧ ಬಿಸಿಸಿಐ ಕಠಿಣ ಕ್ರಮ: ಜೇಟ್ಲಿ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ಹಾಗೂ ಮಂಡಳಿಯ ಶಿಸ್ತು ಪಾಲನ ಸಮಿತಿಯ ಸದಸ್ಯ ಅರುಣ್ ಜೇಟ್ಲಿ ಸೋಮವಾರ ಹೇಳಿದ್ದಾರೆ.
ಹಗರಣ ಸಂಬಂಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಮತ್ತು ಭದ್ರತಾ ಕೇಂದ್ರ ತನಿಖೆ ನಡೆಸಲಿದೆ ಎಂದು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ 15 ದಿನಗಳ ಗಡುವು ನೀಡಿದ್ದು, ಅಷ್ಟರೊಳಗೆ ಸಮಿತಿ ತನಿಖೆ ಪೂರ್ಣಗೊಳಿಸಿ ವರದಿಯನ್ನು ಒಪ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸ್ಪಾಟ್ ಹಗರಣ ಸಂಬಂಧ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಗೆ ಬಿಸಿಸಿಐ ಅಧ್ಯಕ್ಷನಾಗಿರುವ ನಾನು ಪೂರ್ಣವಾಗಿ ಸಹಕರಿಸಲಿದ್ದೇನೆ ಶ್ರೀನಿವಾಸ್ ಹೇಳಿದ್ದಾರೆ.