ವಿಧಾನಸಭೆ ಉಪಸಭಾಧ್ಯಕ್ಷರಾಗಿ ನಾಡಗೌಡ ಆಯ್ಕೆ
ನಾಳೆ ವಿಧಾನಸಭೆ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷರಾಗಿ ..
ಬೆಂಗಳೂರು: ನಾಳೆ ವಿಧಾನಸಭೆ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮುದ್ದೇಬಿಹಾಳ ಶಾಸಕ ಸಿ.ಎಸ್ ನಾಡಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಇನ್ನು ರಾಮದುರ್ಗ ಶಾಸಕ ಅಶೋಕ್ ಪಟ್ಟಣ್ ಅವರನ್ನು ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ನಾಳೆ ಆರಂಭವಾಗಲಿದ್ದು, ಪ್ರತಿಪಕ್ಷಗಳನ್ನು ಎದುರಿಸಲು ಸಕಲ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಂಡಿದೆ. ವಿರೋಧ ಪಕ್ಷಗಳು ಸಹ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಪ್ರತಿಪಕ್ಷಗಳಲ್ಲೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಹಿರಿಯ ನಾಯಕರಿದ್ದು, ಅಧಿವೇಶನ ರಂಗೇರುವುದು ಬಹುತೇಕ ಖಚಿತವಾಗಿದೆ.
ಅಧಿವೇಶನ ಆರಂಭವಾಗುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದ ನಂತರ ಹಿರಿಯ ಶಾಸಕ ಕಾಗೋಡು ತಿಮ್ಮಪ್ಪ ಅವರು ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಆಡಳಿತ ಪಕ್ಷ ಬಹುಮತಕ್ಕಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ. ಇನ್ನು ಬಿಜೆಪಿ ಮತ್ತು ಜೆಡಿಎಸ್ ಸಮಬಲ ಸಾಧಿಸಿದ್ದು, ಅಧಿಕೃತ ಪ್ರತಿಪಕ್ಷ ಯಾವುದು ಎಂಬುದು ನಾಳೆ ಸದನದಲ್ಲಿ ನಿರ್ಧಾರವಾಗಲಿದೆ.