ಪೆಟ್ರೋಲ್ ಬೆಲೆ 75 ಪೈಸೆ ಏರಿಕೆ
ಇಷ್ಟು ದಿನ ಇಳಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್ ಬೆಲೆ ಇಂದು ದಿಡೀರ್ ಏರಿಕೆಯಾಗಿದೆ.
ನವದೆಹಲಿ: ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 75 ಪೈಸೆ ಏರಿಕೆಯಾಗಿದೆ.
ಇಷ್ಟು ದಿನ ಇಳಿಕೆಯತ್ತ ಮುಖ ಮಾಡಿದ್ದ ಪೆಟ್ರೋಲ್ ಬೆಲೆ ಇಂದು ದಿಡೀರ್ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 75 ಪೈಸೆ ಏರಿಕೆಯಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಗೆ ಬರಲಿದೆ.
ತೈಲ ಆಮದು ಸುಂಕ ಹೆಚ್ಚಾದ ಹಿನ್ನಲೆಯಲ್ಲಿ ಪೆಟ್ರೋಲ್ ದರ ಏರಿಕೆ ಅನಿವಾರ್ಯವಾಗಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಕೇಂದ್ರ ಇಂಧನ ಇಲಾಖೆ ಪೆಟ್ರೋಲ್ ದರ ಏರಿಕೆಗೆ ಅಸ್ತು ಎಂದಿದೆ. ಅಲ್ಲದೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ರುಪಾಯಿ ಮೌಲ್ಯ ಕುಸಿದಿರುವುದು ಕೂಡ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ. ಪ್ರತಿ ಅಮೆರಿಕನ್ ಡಾಲರ್ಗೆ 56.39ರುಗಳಾಗಿದ್ದು, ಡಾಲರ್ ಎದುರು ರುಪಾಯಿ ಮೌಲ್ಯ ಕುಸಿದಿದೆ.