ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

10 ಟಿಎಂಸಿ ನೀರಿಗೆ ತ.ನಾಡು ಬೇಡಿಕೆ; ನೀರಿಲ್ಲ ಎಂದ ಕರ್ನಾಟಕ

ಕುಡಿಯುವ ನೀರಿಗಾಗಿ ರಾಜ್ಯ ಪರದಾಡುತ್ತಿರುವ ಇಂತಹ ಸಂದರ್ಭದಲ್ಲಿ 10 ಟಿಎಂಸಿ ಕಾವೇರಿ ನೀರು ಬಿಡಬೇಕು ಎಂದು...

Lingaraj Badiger
Updated On : 1 Jun 2013, 2:23 am

ನವದೆಹಲಿ:  ಕುಡಿಯುವ ನೀರಿಗಾಗಿ ರಾಜ್ಯ ಪರದಾಡುತ್ತಿರುವ ಇಂತಹ ಸಂದರ್ಭದಲ್ಲಿ 10 ಟಿಎಂಸಿ ಕಾವೇರಿ ನೀರು ಬಿಡಬೇಕು ಎಂದು ಶನಿವಾರ ತಮಿಳುನಾಡು ಬೇಡಿಕೆ ಇಟ್ಟಿದೆ. ಆದರೆ ನಮ್ಮಲ್ಲಿ ಯಾವುದೇ ರೀತಿಯ ನೀರಿಲ್ಲ ಎಂದು ಕರ್ನಾಟಕ ಸ್ಪಷ್ಟವಾಗಿ ಹೇಳಿದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ನೂತನ ಕಾವೇರಿ ಮೇಲ್ವಿಚಾರಣಾ ಸಮಿತಿಯ ಸಭೆಯಲ್ಲಿ, ಜೂನ್ ತಿಂಗಳಲ್ಲಿ ಮೂರು ಹಂತಗಳಲ್ಲಿ ಒಟ್ಟು 10 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಒತ್ತಾಯಿಸಿತು. ಇದಕ್ಕೆ ಪ್ರತಕ್ರಿಯಿಸಿದ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರು, ನಮ್ಮಲ್ಲಿ ನೀರೇ ಇಲ್ಲ ಎಂದರು. ಹೀಗಾಗಿ ಸಭೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರದೇ ಅಂತ್ಯಗೊಂಡಿತು.

ಇನ್ನು ಸಭೆಯಲ್ಲಿ ತಾತ್ಕಾಲಿಕ ಸಮಿತಿಯ ಹದಿನಾಲ್ಕು ಕಾರ್ಯಸೂಚಿಯ ಬಗ್ಗೆ ತನ್ನ ನಿಲುವು ತಿಳಿಸಲು ಕರ್ನಾಟಕ ನಾಲ್ಕು ವಾರಗಳ ಕಾಲಾವಕಾಶ ಕೇಳಿತು. ಆದರೆ ಇದಕ್ಕೆ ಒಪ್ಪದ ಜಲಸಂಪನ್ಮೂಲ ಕಾರ್ಯದರ್ಶಿ, 10 ದಿನಗಳ ಕಾಲಾವಕಾಶ ನೀಡಿ, ಸಭೆಯನ್ನು ಜೂನ್ 12ಕ್ಕೆ ಮುಂದೂಡಿದರು.

ಕಾವೇರಿ ನ್ಯಾಯಾಧಿಕರಣದ ಐತೀರ್ಪಿನಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಕಾಲದಲ್ಲಿ ಆಗದಿರುವ ಬಗ್ಗೆ ತಮಿಳುನಾಡು ತಕರಾರು ತೆಗೆದಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಪರ ವಕೀಲರಾದ ಫಾಲಿ ನಾರಿಮನ್ ಅವರ ಸಲಹೆ ಮೇರೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ಮೇಲ್ವಿಚಾರಣಾ ಸಮಿತಿ ರಚನೆ ಮಾಡುವಂತೆ ಮೇ 10ರಂದು ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement