ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್

ಇಂಡೋ-ಪಾಕ್ ಪ್ರಧಾನಿಗಳು ಪರಸ್ಪರ ಭೇಟಿ ಮಾಡಿ ಹಿಂದಿರುಗುತ್ತಿದ್ದಂತೆಯೇ ಪಾಕಿಸ್ತಾನ ಸೈನಿಕರು ಮತ್ತೆ ಕದನಮ ವಿರಾಮ ಉಲ್ಲಂಘಿಸಿದ್ದಾರೆ.

Srinivasa Murthy VN
Updated On : 2 Oct 2013, 10:57 am

ನವದೆಹಲಿ: ಇಂಡೋ-ಪಾಕ್ ಪ್ರಧಾನಿಗಳು ಪರಸ್ಪರ ಭೇಟಿ ಮಾಡಿ ಹಿಂದಿರುಗುತ್ತಿದ್ದಂತೆಯೇ ಪಾಕಿಸ್ತಾನ ಸೈನಿಕರು ಮತ್ತೆ ಕದನಮ ವಿರಾಮ ಉಲ್ಲಂಘಿಸಿದ್ದಾರೆ.

ಕಾಶ್ಮೀರದ ಪೂಂಛ್ ಜಿಲ್ಲೆಯ ಮೆಂದಾರ್ ಸೆಕ್ಟರ್‌ನಲ್ಲಿದ್ದ ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳವಾರ ಮಧ್ಯ ರಾತ್ರಿ 2.30ರ ಸುಮಾರಿನಲ್ಲಿ ಪಾಕಿಸ್ತಾನ ಸೈನಿಕರು ಸತತ ಒಂದು ಗಂಟೆಗಳ ಕಾಲ ಗುಂಡಿನ ಸುರಿಮಳೆ ಗೈದಿದ್ದು, ಸಾವು ನೋವಿನ ಕುರಿತು ವರದಿಯಾಗಿಲ್ಲ ಎಂದು ರಕ್ಷಣಾ ಇಲಾಖೆ ವಕ್ತಾರ ಎಸ್.ಎನ್.ಆಚಾರ್ಯ ಸ್ಪಷ್ಟಪಡಿಸಿದ್ದಾರೆ.

ಪಾಕ್ ಸೈನಿಕರ ದಾಳಿಗೆ ಪ್ರತಿಯಾಗಿ ಭಾರತೀಯ ಸೈನಿಕರು ಪ್ರತಿದಾಳಿ ನಡೆಸಿದ್ದು, ಸುಮಾರು ಅರ್ಧ ಗಂಟೆಗಳ ಗುಂಡಿನ ದಾಳಿ ನಡೆಸಿದ್ದಾರೆ. ಪಾಕ್ ಸೈನಿಕರ ಅಪ್ರಚೋದಿತ ದಾಳಿಗೆ ಭಾರತೀಯ ಸೇನಾಪಡೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ ಬ್ರಿಗೇಡಿಯರ್‌ಗಳ ಮಟ್ಟದಲ್ಲಿ ಚರ್ಚಿಸುವುದಾಗಿ ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಭಾರತ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರು ನಿನ್ನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ಪರಸ್ಪರ ಭೇಟಿ ಮಾಡಿ ಚರ್ಚಿಸಿದ್ದರು. ನಿನ್ನೆ ರಾತ್ರಿಯಷ್ಟೇ ಪ್ರಧಾನಿ ಸಿಂಗ್ ಸ್ವದೇಶಕ್ಕೆ ವಾಪಸಾಗಿದ್ದರು. ಪ್ರಧಾನಿ ವಾಪಸಾಗುತ್ತಿದ್ದಂತೆಯೇ ಗಡಿಯಲ್ಲಿ ಮತ್ತೆ ಪಾಕಿಸ್ತಾನ ತನ್ನ ಹಳೇ ಚಾಳಿ ಮುಂದುವರೆಸಿರುವುದು ಟೀಕೆಗೆ ಗುರಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement