ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಜೆಡಿಎಸ್‌ಗೆ ಬಸವನಗೌಡ ಪಾಟೀಲ್ ಯತ್ನಾಳ್ ರಾಜಿನಾಮೆ

ಮಾಜಿ ಕೇಂದ್ರ ಸಚಿವ ಮತ್ತು ಜೆಡಿಎಸ್ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ಜೆಡಿಎಸ್‌ಗೆ ರಾಜಿನಾಮೆ ನೀಡಿದ್ದಾರೆ.

Srinivasa Murthy VN
Updated On : 3 Oct 2013, 4:24 am

ಬೆಂಗಳೂರು: ಮಾಜಿ ಕೇಂದ್ರ ಸಚಿವ ಮತ್ತು ಜೆಡಿಎಸ್ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುರುವಾರ ಜೆಡಿಎಸ್‌ಗೆ ರಾಜಿನಾಮೆ ನೀಡಿದ್ದಾರೆ.

ಇಂದು ಫ್ಯಾಕ್ಸ್ ಮೂಲಕ ಜೆಡಿಎಸ್ ರಾಷ್ಟ್ರಾದ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ರಾಜಿನಾಮೆ ಪತ್ರವನ್ನು ರವಾನಿಸಿದ್ದಾರೆ.

ಈ ಹಿಂದೆ ಬಿಜಾಪುರದಲ್ಲಿ ನಡೆದಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಬೆಂಬಲ ಸೂಚಿಸುವಂತೆ ಮನವಿಮಾಡಿದ್ದರು. ಬಸವನಗೌಡ ಪಾಟೀಲ್ ಯತ್ನಾಳ್ ಅವರ ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ್ದ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಇದು ಅವರ ವೈಯುಕ್ತಿಕ ಅಭಿಪ್ರಾಯವಾಗಿದ್ದು, ಅವರ ಹೇಳಿಕೆಯನ್ನು ನಾನು ನಿರ್ಲಕ್ಷಿಸುತ್ತೇನೆ ಎಂದು ಹೇಳಿದ್ದರು.

ಅಲ್ಲದೆ ಇಂದು ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ದೇವೇಗೌಡ ಅವರು, ಅವರಾಗೇ ಪಕ್ಷಕ್ಕೆ ಆಗಮಿಸಿದ್ದರು. ಅವರಾಗೇ ತಮ್ಮ ಮೂಲ ಪಕ್ಷಕ್ಕೆ ಮರಳುವುದಾದರೇ ಹೋಗಲಿ. ನಾನು ಅವರನ್ನು ತಡೆಯುವುದಿಲ್ಲ ಎಂದು ಹೇಳಿದ್ದರು.

ಯತ್ನಾಳ್ ಬಿಜೆಪಿಗೆ ಮರಳುವುದು ಖಚಿತ
ಎರಡು ದಿನಗಳ ಹಿಂದಷ್ಟೆ ಬಿಜಾಪುರದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುವಂತೆ ಕೋರಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾತೃ ಪಕ್ಷಕ್ಕೆ ಮರಳುವುದು ಬಹುತೇಕ ಖಚಿತವಾಗಿದ್ದು, ಇದಕ್ಕಾಗಿ ವೇದಿಕೆ ಸಿದ್ಧವಾಗುತ್ತಿದೆ.

ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ತೊರೆದಿರುವ ನಾಯಕರನ್ನು ವಾಪಸ್ ಪಕ್ಷಕ್ಕೆ ಕರೆತರಬೇಕು ಎಂಬ ರಾಷ್ಟ್ರಮಟ್ಟದ ನಿರ್ಣಯದ ಹಿನ್ನೆಲೆಯಲ್ಲಿ, ರಾಜ್ಯದಲ್ಲೂ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement