ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾನು ಮಹಾತ್ಮ ಗಾಂಧಿ ಅವರ ಅನುಯಾಯಿ: ರಾಹುಲ್

ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಕಟ್ಟಾ ಅನುಯಾಯಿ. ನಾನು ಅವರ ಆದರ್ಶಗಳನ್ನು ಪಾಲಿಸುತ್ತೇನೆ ಎಂದು ಕಾಂಗ್ರೆಸ್...

Vishwanath S
Updated On : 3 Oct 2013, 3:15 am

ಅಹಮದಾಬಾದ್: ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಕಟ್ಟಾ ಅನುಯಾಯಿ. ನಾನು ಅವರ ಆದರ್ಶಗಳನ್ನು ಪಾಲಿಸುತ್ತೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗುಜರಾತ್‌ಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಇಂದು ಮಹಾತ್ಮಾ ಗಾಂಧಿಜೀ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು.

ದೇಶದ ಸ್ವಾತಂತ್ರಕ್ಕಾಗಿ ದಂಡಿ ಯಾತ್ರೆ ಕೈಗೊಂಡು ಅಹಿಂಸಾ ಹೋರಾಟಕ್ಕೆ ಚಾಲನೆ ನೀಡಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀಯ ಸಬರ್‌ಮತಿ ಆಶ್ರಮಕ್ಕೆ ಇಂದು ಭೇಟಿ ನೀಡಿದ ರಾಹುಲ್ ಗಾಂಧಿ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಳೆದರು. ಇದೇ ವೇಳೆ, ಸಂದರ್ಶಕರ ಪುಸ್ತಕದಲ್ಲಿ ರಾಹುಲ್ ಗಾಂಧಿ ಅವರು 'ನಾನು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯ ಕಟ್ಟಾ ಅನುಯಾಯಿ. ಅವರ ಆದರ್ಶಗಳನ್ನು ಪಾಲಿಸುತ್ತೇನೆ. ಧನ್ಯವಾದಗಳು ಎಂದು ಬರೆದಿದ್ದಾರೆ.

ಈ ಆಶ್ರಮದ ಬಗ್ಗೆ ನನಗೆ ತುಂಬಾ ಗೌರವವಿದ್ದು, ಆಶ್ರಮಕ್ಕೆ ಬರುವುದರಿಂದ ನನಗೆ ಹೆಮ್ಮೆಯಾಗುತ್ತದೆ. ಸ್ವಾತಂತ್ರಕ್ಕಾಗಿ ಮಹಾತ್ಮಾ ಗಾಂಧಿಜೀ ಹೋರಾಟ ಅಪ್ರತಿಮ. ಹೀಗಾಗಿ ಅವರ ಆದರ್ಶಗಳನ್ನು ನಾನು ಪಾಲಿಸುತ್ತೇನೆ ಎಂದು ರಾಹುಲ್ ಬರೆದಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಸ್ವಕ್ಷೇತ್ರವಾದ ಗುಜರಾತ್‌ನಲ್ಲಿ ಕಾಂಗ್ರೆಸ್ ಪ್ರಚಾರ ಕೈಗೊಂಡಿದೆ. ಈ ಸಂಬಂಧ  ಅಹಮದಾಬಾದ್‌ಗೆ ಆಗಮಿಸಿದ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರ ಜತೆ ಸಮಾಲೋಚನೆ ನಡೆಸಲಿದ್ದು, ಆನಂತರ ರಾಜ್‌ಕೋಟ್‌ಗೆ ತೆರಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement