ನೌಕರರಿಗೆ ದಸರಾ ಕೊಡುಗೆ: ತುಟ್ಟಿ ಭತ್ಯೆ ಹೆಚ್ಚಳ
ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ದಸರಾ ಕೊಡುಗೆ ನೀಡಿದ್ದು, ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ದಸರಾ ಕೊಡುಗೆ ನೀಡಿದ್ದು, ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರಿ ನೌಕರರ ಭತ್ಯೆಯಲ್ಲಿ ಶೇ.6 ರಷ್ಟು ಹೆಚ್ಚಳ ಮಾಡಲಾಗಿದ್ದು, ಜುಲೈ ತಿಂಗಳಿನಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ನೀಡಲಾಗಿದೆ. ಇದೇ ಅಕ್ಟೋಬರ್ 5ರಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ದಸರಾ ಕಾರ್ಯಕ್ರಮಗಳು ಅಧಿಕೃತವಾಗಿ ಆರಂಭಗೊಳ್ಳಲ್ಲಿದ್ದು, ದಸರಾ ಆರಂಭಕ್ಕೂ ಮುನ್ನವೇ ರಾಜ್ಯ ಸರ್ಕಾರ ನೌಕರರಿಗೆ ದಸರಾ ಉಡುಗೊರೆ ನೀಡಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರಿನವರೇ ಆದ್ದರಿಂದ ಈ ಬಾರಿಯ ದಸರಾ ಆಚರಣೆ ಮತ್ತಷ್ಟು ವಿಜೃಂಭಣೆಯಿಂದ ನಡೆಯಲಿದ್ದು, ಪ್ರವಾಸಿಗರ ಕಣ್ಮನ ಸೆಳೆಯಲಿದೆ.