ಪ್ರಧಾನಿ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಜಾ
ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ವಿರುದ್ಧ ಸಲ್ಲಿಸಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್..
ಲಖನೌ: ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ವಿರುದ್ಧ ಸಲ್ಲಿಸಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಅಲಹಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.
ವಿವಾದಾತ್ಮಕ ಸುಗ್ರೀವಾಜ್ಞೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನೂತನ್ ಠಾಕೂರ್ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ವಿಷಯ ಸುಪ್ರೀಂ ಕೋರ್ಟ್ಗೆ ಸಂಬಂಧಿಸಿದ್ದು ಎಂದು ಹೇಳಿದೆ.
ಪ್ರಧಾನಿ ಸಿಂಗ್ ಅವರು ಕಳಂಕಿತ ಶಾಸಕ, ಸಂಸದರನ್ನು ರಕ್ಷಿಸುವ ಸಲುವಾಗಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವೇ ಸುಗ್ರೀವಾಜ್ಞೆ ಹೊರಡಿಸಿದ್ದು ನ್ಯಾಯಾಂಗ ನಿಂದನೆಯಾಗಿದೆ ಎಂದು ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ ದೂರಿದ್ದರು. ಅಲ್ಲದೆ ನ್ಯಾಯಾಂಗ ನಿಂದನೆ ಕಾಯ್ದೆಯಡಿ ಪ್ರಧಾನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.
ಶಾಸಕರನ್ನು ಅನರ್ಹಗೊಳಿಸುವ ಸುಪ್ರೀಂಕೋರ್ಟ್ನ ಜು.10ರ ತೀರ್ಪಿನ ಹಿನ್ನೆಲೆಯಲ್ಲಿ ಜನಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಸರ್ಕಾರ ಈಗಾಗಲೇ ಕೈಬಿಟ್ಟಿದೆ.