ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

5 ರಾಜ್ಯಗಳ ವಿ.ಚುನಾವಣಾ ದಿನಾಂಕ ಪ್ರಕಟ

ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದ್ದು,..

Lingaraj Badiger
Updated On : 4 Oct 2013, 5:32 am

ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದ್ದು, ಚುನಾವಣೆ ನಡೆಯುವ ದೆಹಲಿ, ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ಮಿಜೋರಾಂಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ.

ಈ ಸಂಬಂಧ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಅವರು, ನಾಲ್ಕು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8ಕ್ಕೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಡಿಸೆಂಬರ್ 4ಕ್ಕೆ ರಾಜಸ್ತಾನ, ಡಿಸೆಂಬರ್ 1ಕ್ಕೆ ದೆಹಲಿ, ನವೆಂಬರ್ 25ಕ್ಕೆ ಮಧ್ಯಪ್ರದೇಶ ಹಾಗೂ ಡಿಸೆಂಬರ್ 4ಕ್ಕೆ ಮಿಜೋರಾಂನಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದೆ. ಇನ್ನು ನಕ್ಸಲ್ ಪೀಡಿತ ಛತ್ತೀಸ್ಗಢದಲ್ಲಿ ಎರಡು ಹಂತದ ಚುನಾವಣೆ ನಡೆಯುತ್ತಿದ್ದು, ನ.11 ಮೊದಲ ಹಂತ ಹಾಗೂ 19ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ ಎಂದು ಅವರು ತಿಳಿಸಿದರು.

ಐದು ರಾಜ್ಯಗಳ 630 ವಿಧಾನಸಭಾ ಕ್ಷೇತ್ರಗಳಲ್ಲಿ 1.30 ಲಕ್ಷ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಂಪತ್ ವಿವರಿಸಿದರು. ಅಲ್ಲದೆ ಚುನಾವಣೆಗೂ ಮುನ್ನ ಎಲ್ಲ ಮತದಾರರಿಗೂ ಗುರುತಿನ ಚೀಟಿಯನ್ನು ರವಾನಿಸಲಾಗುವುದು ಎಂದು ತಿಳಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ಐದು ರಾಜ್ಯಗಳಲ್ಲಿ 60 ಸಾವಿರ ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಚುನಾವಣಾ ಆಯೋಗ ಈಗಾಗಲೇ ಕೇಂದ್ರ ಗೃಹ ಸಚಿವಾಲಯಕ್ಕೆ ಕೇಳಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement