ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕೊನೆಗೂ ವಿಶ್ವಕಪ್‌ಗೆ ಅರ್ಹತೆ ಗಿಟ್ಟಿಸಿದ ಆಫ್ಘಾನಿಸ್ತಾನ

ಅಂತಾರಾಷ್ಟ್ರೀಯ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆಂಬ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಬಹುವರ್ಷಗಳ ಕನಸು ಕೊನೆಗೂ ಕೈಗೂಡಿದೆ.

Srinivasa Murthy VN
Updated On : 4 Oct 2013, 5:01 am

ಶಾರ್ಜಾ: ಅಂತಾರಾಷ್ಟ್ರೀಯ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಕೆಂಬ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಬಹುವರ್ಷಗಳ ಕನಸು ಕೊನೆಗೂ ಕೈಗೂಡಿದೆ.

2015ರಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯಾವಳಿಗಾಗಿ ಶಾರ್ಜಾದಲ್ಲಿ ಇಂದು ನಡೆದ ಅರ್ಹತಾ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ಕೀನ್ಯಾ ವಿರುದ್ಧ 7 ವಿಕೆಟ್‌ಗಳ ಭಾರಿ ವಿಜಯ ಸಾಧಿಸಿದೆ. ಆ ಮೂಲಕ 2015ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ 15 ತಂಡಗಳ ಪಟ್ಟಿಯಲ್ಲಿ ಆಫ್ಘಾನಿಸ್ತಾನ ಅರ್ಹತೆ ಗಿಟ್ಟಿಸಿದೆ.

ಶಾರ್ಜಾದಲ್ಲಿ ಇಂದು ನಡೆದ ಕೀನ್ಯಾ ವಿರುದ್ಧದ ನಿರ್ಣಾಯಕ ಅರ್ಹತಾ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ ತಂಡ ಮೊದಲು ಫೀಲ್ಡಿಂಗ್ ಆರಿಸಿಕೊಂಡಿತು. ಟಾಸ್ ಸೋತರು ಬ್ಯಾಟಿಂಗ್ ಅವಕಾಶ ಪಡೆದ ದುರ್ಬಲ ಕೀನ್ಯಾ ತಂಡ 43.3 ಓವರ್‌ಗಳಲ್ಲಿ 93 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದು ಕೊಂಡಿತು. ಅಲ್ಪ ಮೊತ್ತವನ್ನು ಬೆನ್ನತ್ತಿದ ಆಫ್ಘಾನಿಸ್ತಾನ 3 ವಿಕೆಟ್ ಕಳೆದುಕೊಂಡು ಕೇವಲ 20.5 ಓವರ್‌ಗಳಲ್ಲಿ ಗುರಿ ಮಟ್ಟಿ ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಒಟ್ಟಾರೆ 19 ಅಂಕಗಳನ್ನು ಕಲೆಹಾಕುವ ಮೂಲಕ ವಿಶ್ವಕಪ್ ಪಂದ್ಯಾವಳಿಗೆ ಅರ್ಹತೆ ಪಡೆದಿದೆ.

14 ಅಂಕಗಳನ್ನು ಗಳಿಸಿರುವ ಐರ್ಲೆಂಡ್ ತಂಡ ಈಗಾಗಲೇ ವಿಶ್ವಕಪ್ ಪ್ರವೇಶಿಸಿದ್ದು ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement