ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಾಸಕ ನಾಗೇಂದ್ರಗೆ 1 ದಿನ ನ್ಯಾಯಾಂಗ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ಬಂಧನಕ್ಕೆ ಒಳಗಾಗಿದ್ದ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಶಾಸಕ ನಾಗೇಂದ್ರ..

Lingaraj Badiger
Updated On : 4 Oct 2013, 12:29 pm

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಸಿಬಿಐ ಬಂಧನಕ್ಕೆ ಒಳಗಾಗಿದ್ದ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಶಾಸಕ ನಾಗೇಂದ್ರ ಬಾಬು ಅವರನ್ನು ಶುಕ್ರವಾರ ಸಿಬಿಐ ಕೋರ್ಟ್ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ನಾಗೇಂದ್ರ ಅವರನ್ನು ನಿನ್ನೆ ವಶಕ್ಕೆ ಪಡೆದಿದ್ದ ಸಿಬಿಐ ಅಧಿಕಾರಿಗಳು, ಇಂದು ಸಿಬಿಐ ವಿಶೇಷ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀಶಾನಂದ ಅವರು ಒಂದು ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಅಲ್ಲದೆ ನಾಳೆ ಮತ್ತೆ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿದರು.

ಈಗಲ್ ಟ್ರೇಡರ್ಸ್ ಹಾಗೂ ಲಾಜಿಸ್ಟಿಕ್ ಮಾಲೀಕರಾಗಿರುವ ನಾಗೇಂದ್ರ ಅವರು ತಮ್ಮ ಆಪ್ತ ಕುರುಬ ನಾಗರಾಜ್ ಎಂಬುವರ ಮೂಲಕ ಅದಿರು ಸಾಗಣೆ ವ್ಯವಹಾರದಲ್ಲಿ ತೊಡಗಿದ್ದರು. ಈಗಲ್ ಟ್ರೇಡರ್ಸ್ ಮೂಲಕ ಗಣಿ ಪ್ರದೇಶಗಳಿಂದ ಲಕ್ಷಾಂತರ ಮೆಟ್ರಿಕ್ ಟನ್ ಅದಿರನ್ನು ಬೇಲೆಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ನಾಗೇಂದ್ರ ಬಾಬು ಅವರನ್ನು ಬಂಧಿಸಲಾಗಿದೆ.

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ಮತ್ತೊಬ್ಬ ಆರೋಪಿ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ತೆರಳಿದ್ದು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿ ಆದೇಶವನ್ನು ಅ.5ಕ್ಕೆ ಕಾಯ್ದಿರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement