ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅ.11ರ ವರೆಗೆ ಶಾಸಕ ನಾಗೇಂದ್ರ ಸಿಬಿಐ ವಶಕ್ಕೆ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಶಾಸಕ ನಾಗೇಂದ್ರ ಬಾಬು..

Lingaraj Badiger
Updated On : 5 Oct 2013, 12:32 pm

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಶಾಸಕ ನಾಗೇಂದ್ರ ಬಾಬು ಅವರನ್ನು ಸಿಬಿಐ ಕೋರ್ಟ್ ಅಕ್ಟೋಬರ್ 11ರವರೆಗೆ ಸಿಬಿಐ ವಶಕ್ಕೆ ಒಪ್ಪಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ನಾಗೇಂದ್ರನನ್ನು ಇಂದು ಸಿಬಿಐ ಅಧಿಕಾರಿಗಳು ಸಿಬಿಐ ವಿಶೇಷ ಕೋರ್ಟ್ಗೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರು.

ಸಿಬಿಐ ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿದ ಕೋರ್ಟ್, ನಾಗೇಂದ್ರನನ್ನು ಅಕ್ಟೋಬರ್ 11ರವರೆಗೆ ಸಿಬಿಐ ವಶಕ್ಕೆ ನೀಡಿದೆ.

ನಿನ್ನೆ ಸಿಬಿಐ ಕಚೇರಿಯಿಂದ ನಾಗೇಂದ್ರ ಅವರನ್ನು ವಿಜಯನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು, ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ಮನೆಯಲ್ಲಿಯೇ ವಿಚಾರಣೆ ನಡೆಸಿದ ನ್ಯಾಯಾದೀಶ ಶ್ರೀಶಾನಂದ ಅವರು, ನಾಗೇಂದ್ರ ಅವರನ್ನು ಒಂದು ದಿನ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಅಲ್ಲದೆ ಇಂದು ಮತ್ತೆ ತಮ್ಮ ಮುಂದೆ ಹಾಜರು ಪಡಿಸುವಂತೆ ಸಿಬಿಐ ಅಧಿಕಾರಿಗಳಿಗೆ ಸೂಚಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement