ಇರಾಕ್ನಲ್ಲಿ ಆತ್ಮಹತ್ಯಾ ಬಾಂಬ್ ದಾಳಿ: 15 ಸಾವು
ಇರಾಕ್ನಲ್ಲಿ ಉಗ್ರರು ನಡೆಸಿದ ಆತ್ಮಹತ್ಯಾ ಬಾಂಬ್ ಸ್ಫೋಟದಿಂದಾಗಿ 15 ಮಂದಿ ಸಾವಿಗೀಡಾಗಿದ್ದಾರೆ.
ಮೊಸುಲ್: ಇರಾಕ್ನಲ್ಲಿ ಉಗ್ರರು ನಡೆಸಿದ ಆತ್ಮಹತ್ಯಾ ಬಾಂಬ್ ಸ್ಫೋಟದಿಂದಾಗಿ 15 ಮಂದಿ ಸಾವಿಗೀಡಾಗಿದ್ದಾರೆ.
ಉತ್ತರ ಇರಾಕ್ನ ಪ್ರಾಥಮಿಕ ಶಾಲಾ ಆವರಣದೊಳಗೆ ಟ್ರಕ್ವೊಂದಕ್ಕೆ ಭಾರಿ ಸ್ಫೋಟಕಗಳನ್ನು ತುಂಬಿಸಿ ಉಗ್ರರು ನಡೆಸಿದ ಸ್ಫೋಟದಿಂದಾಗಿ ಶಾಲಾ ಸಿಬ್ಬಂದಿ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸುನ್ನಿ ಭಂಡುಕೋರರು ಶಿಯಾ ಮುಸ್ಲಿಂರನ್ನು ಗುರಿಯಾಗಿಸಿಕೊಂಡು ಈ ಆತ್ಮಹತ್ಯಾ ಬಾಂಬ್ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಂತೆಯೇ ಮೊಸುಲ್ ನಗರದ ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ಉಗ್ರರು ಬಾಂಬ್ ದಾಳಿ ನಡೆಸಿದ್ದಾರೆ. ಆದರೆ ಘಟನೆಯಲ್ಲಿ ಸಾವುನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ. ಆದರೆ ಶಾಲೆಯ ಮೇಲೆ ನಡೆದ ಬಾಂಬ್ ದಾಳಿಯಿಂದಾಗಿ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.