ಎಸ್ಪಿಗೆ ಬಿಜಿ ಪಾಟೀಲ್: ಬಿದರಿಗೆ ಬಡ್ತಿ
ಮಾಜಿ ಕೇಂದ್ರ ಸಚಿವ ಬಾಬುಗೌಡ ಪಾಟೀಲ್ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಸೋಮವಾರ ಅಧ್ಯಕ್ಷ ಮುಲಾಯಂಸಿಂಗ್ ಯಾದವ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ನವದೆಹಲಿ: ಮಾಜಿ ಕೇಂದ್ರ ಸಚಿವ ಬಾಬುಗೌಡ ಪಾಟೀಲ್ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಸೋಮವಾರ ಅಧ್ಯಕ್ಷ ಮುಲಾಯಂಸಿಂಗ್ ಯಾದವ್ ಅವರು ಪಕ್ಷಕ್ಕೆ ಬರಮಾಡಿಕೊಂಡರು.
ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂಸಿಂಗ್ ಯಾದವ್ ಅವರು ಬಾಬುಗೌಡ ಪಾಟೀಲ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವುದಾಗಿ ಘೋಷಿಸಿದರು. ಅಂತೆಯೇ ಬಿಜಿ ಪಾಟೀಲ್ ಅವರಿಗೆ ಕರ್ನಾಟಕ ಸಮಾಜವಾಧಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುತ್ತಿರುವುದಾಗಿ ಅವರು ತಿಳಿಸಿದರು.
ರಾಜ್ಯಾಧ್ಯಕ್ಷ ಸ್ಥಾನದಿಂದ ಕಾರ್ಯಕಾರಿಣಿಗೆ ಬಿದರಿಗೆ ಬಡ್ತಿ
ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಬಿದರಿ ಅವರಿಗೆ ಬಡ್ತಿ ನೀಡಲಾಗಿದ್ದು ಕರ್ನಾಟಕ ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕಾರ್ಯಕಾರಿಣಿ ಸದಸ್ಯ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ.