ಹೈ-ಕ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚನೆಗೆ ಕೇಂದ್ರ ಅಸ್ತು
ಹೈದರಾಬಾದ್ ಕರ್ನಾಟಕ ಭಾಗಕ್ಕೆ 371ನೇ(ಜೆ) ಕಲಂ ಅಡಿ ವಿಶೇಷ ಸ್ಥಾನಮಾನ ಕಲ್ಪಿಸುವ ಸಂಬಂಧ ಪ್ರತ್ಯೇಕ ಅಭಿವೃದ್ಧಿ ಮಂಡಳಿ...
ನವದೆಹಲಿ: ಹೈದರಾಬಾದ್ ಕರ್ನಾಟಕ ಭಾಗಕ್ಕೆ 371ನೇ(ಜೆ) ಕಲಂ ಅಡಿ ವಿಶೇಷ ಸ್ಥಾನಮಾನ ಕಲ್ಪಿಸುವ ಸಂಬಂಧ ಪ್ರತ್ಯೇಕ ಅಭಿವೃದ್ಧಿ ಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ.
ಹೈ.ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಕುರಿತಂತೆ ರಾಜ್ಯ ಸರ್ಕಾರದ ಸಂಪುಟ ಉಪಸಮಿತಿ ಕಳುಹಿಸಿದ್ದ ಪ್ರಸ್ತಾವನೆಗೆ ಇಂದು ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ರಾಷ್ಟ್ರಪತಿಗಳ ಅಂಕಿತದ ಬಳಿಕ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಈ ಅಭಿವೃದ್ಧಿ ಮಂಡಳಿ ರಚನೆಯಾಗಲಿದ್ದು, ಹೈದರಾಬಾದ್ ಕರ್ನಾಟಕ ಭಾಗದ ಆರು ಜಿಲ್ಲೆಗಳಾದ ಗುಲ್ಬರ್ಗಾ, ಬೀದರ್, ಯಾದಗಿರ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜನತೆಗೆ ಇದೊಂದು ಸಿಹಿ ಸುದ್ದಿ ಎಂದು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿಕೊಡಲಾಗಿದೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕಲಂ 371(ಜೆ) ಪ್ರಸ್ತಾವನೆಗೆ ಸಹಿ ಹಾಕಲಿದ್ದು, ಸಹಿ ಹಾಕಿದ ಬಳಿಕ ಮೀಸಲಾತಿ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.