ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೆಹಲಿ ಕಟ್ಟಡ ಕುಸಿತ: 2 ಸಾವು

ದೆಹಲಿಯ ಸದಾರ್ ಬಜಾರ್‌ನಲ್ಲಿ ಬುಧವಾರ ಮೂರು ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ...

Vishwanath S
Updated On : 9 Oct 2013, 2:03 am

ನವದೆಹಲಿ: ದೆಹಲಿಯ ಸದಾರ್ ಬಜಾರ್‌ನಲ್ಲಿ ಬುಧವಾರ ಮೂರು ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಸುಮಾರು 7.30ರಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.

ಕಟ್ಟಡದ ಅವಶೇಷಗಳಡಿ ಸಿಲುಕಿ ನಕ್ಕಿ(60) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಇದೇ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಬಂಟಿ ಮತ್ತು ಸಲೀಂ ಎಂಬುವರನ್ನು ಬರ ಹಿಂದು ರಾವ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಂಟಿ(35) ಎಂಬುವರು ಸಾವನ್ನಪ್ಪಿದ್ದಾರೆ.

ನಕ್ಕಿ ಎಂಬುವರು ಸದಾರ್ ಬಜಾರ್ ಮಾರ್ಕೆಟ್‌ನಲ್ಲಿ ಚಿನ್ನದ ಅಂಗಡಿ ಹೊಂದಿದ್ದರು. ಇಂದು ಬೆಳಿಗ್ಗೆ ಅಂಗಡಿ ತೆರೆಯಲು ಹೋದಂತಾ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಕಟ್ಟಡ ತೆರವು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement