ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರತನ್‌ಗಡ್ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ

ಡಾಟಿಯಾ ಜಿಲ್ಲೆಯಲ್ಲಿರುವ ದುರ್ಗಾ ದೇವಸ್ಥಾನದ ಬಳಿ 112ಕ್ಕೂ ಹೆಚ್ಚು ಜನರು ಸಾವನಪ್ಪಿರುವ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸಲಾಗುವುದು...

Mainashree
Updated On : 14 Oct 2013, 11:53 am

ಭೋಪಾಲ್: ಡಾಟಿಯಾ ಜಿಲ್ಲೆಯಲ್ಲಿರುವ ದುರ್ಗಾ ದೇವಸ್ಥಾನದ ಬಳಿ 112ಕ್ಕೂ ಹೆಚ್ಚು ಜನರು ಸಾವನಪ್ಪಿರುವ ಪ್ರಕರಣ ಕುರಿತು ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ಸರ್ಕಾರ ಸೋಮವಾರ ಹೇಳಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾನ್ ಅವರು, ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕ ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ದೇವಿ ದರ್ಶನಕ್ಕೆ ನೆರೆದಿದ್ದ ಪರಿಣಾಮ ದೇವಸ್ಥಾನದ ಬಳಿ ಇದ್ದ ಸೇತುವೆ ಧ್ವಂಸಗೊಂಡಿದ್ದು, ಅನೇಕ ಜನರು ಸಾವನ್ನಪ್ಪಿದ್ದಾರೆ. ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ 1.5 ಲಕ್ಷ ಪರಿಹಾರ ಧನ ನೀಡಲಾಗುವುದು ಎಂದು ಚೌವ್ಹಾಣ್ ಅವರು ಹೇಳಿದ್ದಾರೆ.

ಘಟನೆ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಷಾಧ ವ್ಯಕ್ತಪಡಿಸಿದ್ದಾರೆ.

ನವರಾತ್ರಿ ಹಬ್ಬದ ಅಂಗವಾಗಿ ಮಧ್ಯಪ್ರದೇಶದ ಡಾಟಿಯಾ ಜಿಲ್ಲೆಯಲ್ಲಿರುವ ದುರ್ಗಾದೇವಿ ದೇವಸ್ಥಾನದ ಬಳಿ ಜನಸಾಗರ ನೆರೆದಿತ್ತು, ಈ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ 112 ಜನರು ಬಲಿಯಾಗಿದ್ದು, 100ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸಿಂಧೂ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆ ಕುಸಿಯುತ್ತಿದೆ ಎಂಬ ವದಂತಿ ಹರಡಿತ್ತು ಎಂದು ವರದಿಯಲ್ಲಿ ತಿಳಿದುಬಂದಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement