ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸ್ ವಶಕ್ಕೆ ಅಸರಾಮ್
ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಧಾರ್ಮಿಕ ಗುರು ಅಸರಾಮ್ ಬಾಪು ಅವರನ್ನು ಮಂಗಳವಾರ ಪೊಲೀಸ್ ವಶಕ್ಕೆ ನೀಡಲಾಗಿದೆ...
ಗಾಂಧಿನಗರ: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಧಾರ್ಮಿಕ ಗುರು ಅಸರಾಮ್ ಬಾಪು ಅವರನ್ನು ಮಂಗಳವಾರ ಪೊಲೀಸ್ ವಶಕ್ಕೆ ನೀಡಲಾಗಿದೆ.
ಅಕ್ಟೋಬರ್ 19ರವರೆಗೆ ಅಸರಾಮ್ ಬಾಪು ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ ಎಂದು ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಮೂರ್ತಿ ವಿ.ಎ ಬುದ್ ಈ ಆದೇಶ ಹೊರಡಿಸಿದ್ದಾರೆ. ಅಸರಾಮ್ ಅವರನ್ನು ಇಂದು ಬೆಳಿಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಜೋಧ್‌ಪುರ್‌ನಿಂದ ಪ್ರಕರಣವನ್ನು ವರ್ಗಾವಣೆ ಮಾಡಿ, ಕಳೆದೆ ರಾತ್ರಿ ಬಿಗಿ ಭದ್ರತೆಯಿಂದ ಅಸರಾಮ್ ಅವರನ್ನು ಕರೆತರಲಾಗಿತ್ತು. ಇಂದು ಬೆಳಿಗ್ಗೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ.
ಜೋಧ್‌ಪುರದಲ್ಲಿ ಅಸಾರಾಮ್ ಟ್ರಸ್ಟ್ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿರುವ 15 ವರ್ಷದ ಬಾಲಕಿಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಧಾರ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ರಾಜಸ್ಥಾನದಲ್ಲಿ ಜೀವ ಭಯವಿದ್ದುದ್ದರಿಂದ ಇಲ್ಲಿಗೆ ಬರಬೇಕಾಯಿತು ಎಂದು ಆಕೆಯ ತಂದೆ ಹೇಳಿದ್ದರು. ದೂರು ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಪ್ರಕರಣವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದ್ದರು.
ಈ ಸಂಬಂಧ ಅಸರಾಮ್ ಬಾಪು ಮತ್ತು ಅವರ ಪುತ್ರ ನಾರಾಯಣ್ ಸಾಯಿ ಅವರನ್ನು ಪೊಲೀಸರು ಬಂಧಿಸಿದ್ದರು.
ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಈ ಹಿಂದೆಯೂ ವಿವಾದಗಳಿಂದ ಸುದ್ದಿಯಾಗಿದ್ದರು.