ನಟ, ನಿರ್ಮಾಪಕ ರಾಘಣ್ಣ ಆಸ್ಪತ್ರೆಗೆ ದಾಖಲು
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರು ಬುಧವಾರ..
ಬೆಂಗಳೂರು: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರು ಬುಧವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಎದೆ ನೋವಿನಿಂದ ಅಸ್ವಸ್ಥಗೊಂಡು ಕುಸಿದ ಬಿದ್ದ ರಾಘಣ್ಣ ಅವರನ್ನು ಕೂಡಲೇ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದ್ದಾರೆ. ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
48 ವರ್ಷದ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವರು ಹಲವು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.