ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಂಡತಿ, ಮಗಳ ಮುಂದೆ ಅಸರಾಮ್ ವಿಚಾರಣೆ

ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಧಾರ್ಮಿಕ ಗುರು ಅಸರಾಮ್ ಬಾಪು ಅವರನ್ನು ಪತ್ನಿ ಮತ್ತು ಮಗಳ ಮುಂದೆ ಭಾನುವಾರ...

Mainashree
Updated On : 21 Oct 2013, 11:53 am

ಗಾಂಧಿನಗರ: ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಧಾರ್ಮಿಕ ಗುರು ಅಸರಾಮ್ ಬಾಪು ಅವರನ್ನು ಪತ್ನಿ ಮತ್ತು ಮಗಳ ಮುಂದೆ ಭಾನುವಾರ ವಿಚಾರಣೆಗೊಳಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ತನ್ನ ಪತ್ನಿ ಮತ್ತು ಮಗಳ ಮುಂದೆಯೇ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿಚಾರಣೆ ವೇಳೆ ಕೇಳುವಂತಹ ಪ್ರಶ್ನೆಗಳಿಗೆ ಅಸರಾಮ್ ಬಾಪು ಉತ್ತರಿಸಬೇಕಿದೆ.

ನಿನ್ನೆ  ಅಸರಾಮ್ ಬಾಪು ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅಲ್ಲಿನ ಸ್ಥಳೀಯ ನ್ಯಾಯಾಲಯ ನ್ಯಾಯಾಮೂರ್ತಿ ಎ.ವಿ ಬುಧ್ ಅವರು, ಅಸರಾಮ್ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ಅಕ್ಟೋಬರ್ 22ರವರೆಗೆ ವಿಸ್ತರಿಸಿದ್ದರು.

ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅಸರಾಮ್ ಅವರನ್ನು ನೀಡಬೇಕು ಎಂದು ಮನವಿ ಮಾಡಿದ್ದರು.

ಜೋಧ್‌ಪುರದಲ್ಲಿ ಅಸಾರಾಮ್ ಟ್ರಸ್ಟ್ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿರುವ 15 ವರ್ಷದ ಬಾಲಕಿಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಧಾರ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ರಾಜಸ್ಥಾನದಲ್ಲಿ ಜೀವ ಭಯವಿದ್ದುದ್ದರಿಂದ ಇಲ್ಲಿಗೆ ಬರಬೇಕಾಯಿತು ಎಂದು ಆಕೆಯ ತಂದೆ ಹೇಳಿದ್ದರು. ದೂರು ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಪ್ರಕರಣವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದ್ದರು.

ಈ ಸಂಬಂಧ ಅಸರಾಮ್ ಬಾಪು ಅವರನ್ನು ಪೊಲೀಸರು ಬಂಧಿಸಿದ್ದರು.

ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಈ ಹಿಂದೆಯೂ ವಿವಾದಗಳಿಂದ ಸುದ್ದಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement