ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಶ್ಮೀರ: ಅಮೆರಿಕಾ ಮಧ್ಯಸ್ಥಿಕೆ ಬೇಡ- ಶಿಂಧೆ

ಕಾಶ್ಮೀರ ವಿವಾದ ಬಗೆಹರಿಯಬೇಕಾದರೆ ಅಮೆರಿಕಾ ಮಧ್ಯಪ್ರವೇಶಿಸಬೇಕು ಎಂಬ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್...

Vishwanath S
Updated On : 21 Oct 2013, 6:10 am

ನವದೆಹಲಿ: ಕಾಶ್ಮೀರ ವಿವಾದ ಬಗೆಹರಿಯಬೇಕಾದರೆ ಅಮೆರಿಕಾ ಮಧ್ಯಪ್ರವೇಶಿಸಬೇಕು ಎಂಬ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಅವರ ಬೇಡಿಕೆಯನ್ನು ಸೋಮವಾರ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ತಳ್ಳಿಹಾಕಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಸಮಸ್ಯೆ ಅತೀ ಕ್ಲಿಷ್ಟವಾಗಿಲ್ಲ. ಇದನ್ನು ಪರಸ್ಪರ ಎರಡು ದೇಶಗಳು ದ್ವಿಪಕ್ಷಿಯ ಮಾತುಕತೆಯೊಂದಿಗೆ ಪರಿಹರಿಸಿಕೊಳ್ಳಬಹುದಾಗಿದೆ. ಹೀಗಾಗಿ ಈ ವಿಷಯದಲ್ಲಿ ಮೂರನೆಯವರ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ, ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟ. ಇದು ಎರಡು ದೇಶಗಳ ನಡುವಿನ ವಿಷಯವಾಗಿದ್ದು, ಇದರಲ್ಲಿ ಮೂರನೇ ದೇಶ ಮಧ್ಯಸ್ಥಿಕೆ ವಹಿಸಬೇಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಇಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿಂಧೆ ಅವರು, ದ್ವಿಪಕ್ಷಿಯ ವಿಷಯಕ್ಕೆ ಮೂರನೇ ವ್ಯಕ್ತಿ ಮಧ್ಯಪ್ರವೇಶಿಸುವುದನ್ನು ನಾವು ಒಪ್ಪುವುದಿಲ್ಲ. ಇದು ಪಾಕ್ ಮತ್ತು ಭಾರತದ ಸಮಸ್ಯೆಯಾಗಿದ್ದು, ಇದನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಇದು ನಮ್ಮ ಸ್ವಂತ ನಿರ್ಧಾರವಲ್ಲ. ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರ್ ಲಾಲ್ ನೆಹರು ಅವರ ನಿಲುವಾಗಿದ್ದು, ಈ ನಿಲುವನ್ನು ಅನುಸರಿಸುತ್ತಾ ಬರಲಾಗಿದೆ ಎಂದರು.

ಬುಧವಾರ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾರನ್ನು ಭೇಟಿ ಮಾಡುವ ಹಿನ್ನೆಲೆಯಲ್ಲಿ ಅಮೆರಿಕಾ ಪ್ರವಾಸದಲ್ಲಿರುವ ಪಾಕ್ ಪ್ರಧಾನಿ ನವಾಜ್ ಶರೀಫ್ ಅವರು, ನಿನ್ನೆಯಷ್ಟೇ ಕಾಶ್ಮೀರ ವಿಷಯವನ್ನು ಇತ್ಯರ್ಥಗೊಳಿಸಲು ಅಮೆರಿಕಾ ಮಧ್ಯಪ್ರವೇಶಿಸಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement