ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಶೀದ್ ರಾಜ್ಯಸಭಾ ಸದಸ್ಯತ್ವ ರದ್ದು

ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಸಂಸದ ರಶೀದ್ ಮಸೂದ್ ಅವರು...

Vishwanath S
Updated On : 21 Oct 2013, 4:38 am

ನವದೆಹಲಿ: ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷ ಶಿಕ್ಷೆಗೆ ಒಳಗಾಗಿರುವ ಕಾಂಗ್ರೆಸ್ ಸಂಸದ ರಶೀದ್ ಮಸೂದ್ ಅವರು ಸೋಮವಾರ ರಾಜ್ಯಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯಸಭೆ ಸದಸ್ಯ ರಶೀದ್ ಮಸೂದ್ ಭಾಗಿಯಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ದೆಹಲಿ ಕೋರ್ಟ್ ಮಸೂದ್ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಮಸೂದ್ ಅವರು ರಾಜ್ಯಸಭೆಯ ಸದಸ್ಯತ್ವ ಸ್ಧಾನವನ್ನು ಕಳೆದುಕೊಂಡಿದ್ದಾರೆ.

1990-91ರಲ್ಲಿ ವಿಪಿ ಸಿಂಗ್ ಸರ್ಕಾರದ ಅವದಿಯಲ್ಲಿ ತ್ರಿಪುರದಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಅನರ್ಹ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಸೀಟು ಕಲ್ಪಿಸಿಕೊಟ್ಟಿದ್ದ ಅಂದಿನ ಆರೋಗ್ಯ ಸಚಿವರಾಗಿದ್ದ ರಶೀದ್ ಮಸೂದ್ ಅವರ ವಿರುದ್ಧ ದೂರ ದಾಖಲಾಗಿತ್ತು. ಪ್ರಕರಣ ಸಂಬಂಧ ರಶೀದ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಧೀಶ ಜೆ.ಪಿ.ಎಸ್ ಮಲಿಕ್ ಅವರು ತೀರ್ಪು ನೀಡಿದ್ದರು.

ಕಳಂಕಿತ ಶಾಸಕ, ಸಂಸದರ ಸದಸ್ಯತ್ವವನ್ನು ಅನರ್ಹಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ಜುಲೈ 10ರಂದು ನೀಡಿದ್ದ ಆದೇಶದನ್ವಯ ರಶೀದ್ ತಮ್ಮ ರಾಜ್ಯಸಭೆಯ ಸದಸ್ಯತ್ವವನ್ನು ಕಳೆದುಕೊಂಡ ಮೊದಲ ವ್ಯಕ್ತಿಯಾಗಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಪ್ರಕಾರ ರಾಜ್ಯಸಭೆಯ ಕಾಂಗ್ರೆಸ್ ಸದಸ್ಯ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯತ್ವದಿಂದ ಮಸೂದ್ ಅವರು ಅನರ್ಹರಾಗಿದ್ದಾರೆ. ಇದರೊಂದಿಗೆ ಮಸೂದ್ ಅವರ ರಾಜಕೀಯ ದಾರಿಗೆ ಕೊಡಲಿ ಪೆಟ್ಟು ಬಿದ್ದಿದ್ದು ಮುಂದಿನ 10 ವರ್ಷಗಳ ಕಾಲ ಚುನಾವಣೆಗಳಲ್ಲಿ ಸ್ಪರ್ಧಿಸುವ ಹಕ್ಕನ್ನು ಸಹ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಹ 1996ರ ಮೇವು ಹಗರಣದಲ್ಲಿ ದೋಷಿ ಎಂದು ರಾಂಚಿ ಕೋರ್ಟ್ ತೀರ್ಪು ನೀಡಿದ್ದು, ಅವರು ಸಹ ಸದ್ಯದಲ್ಲೇ ಲೋಕಸಭೆಯ ಸದಸ್ಯತ್ವವನ್ನು ಕಳೆದುಕೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement