ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸೌಜನ್ಯ ಹತ್ಯೆ: 3 ವಿಚಾರಣೆ ನಡೆಸಿದ ಸಿಐಡಿ

Vishwanath S
Updated On : 21 Oct 2013, 7:51 am

ಬೆಂಗಳೂರು: 17 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ಸಂಬಂಧ ಸೋಮವಾರ ಮೂವರನ್ನು ವಿಚಾರಣೆಗೆ ಒಳಪಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್, ಉದಯ್ ಜೈನ್‌ರನ್ನು ತನಿಖಾಧಿಕಾರಿ ರಾಮಕೃಷ್ಣ ಅವರು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಧರ್ಮಸ್ಥಳದ ಹೊರವಲಯದಲ್ಲಿ ಕಳೆದ ವರ್ಷ ನಡೆದಿದ್ದ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಬೆಳ್ತಂಗಡಿ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಹಿಸಬೇಕು ಎಂದು ಪಟ್ಟು ಹಿಡಿದಿದ್ದವು.

ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಈಗಾಗಲೇ ಸಂತೋಷ ಎಂಬ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಎಫ್‌ಆರ್‌ಐ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement