ಆಮ್ ಆದ್ಮಿ ಪಕ್ಷದ ಖಾತೆಯ ಬಗ್ಗೆ ತನಿಖೆ ನಡೆಸಿ: ಹೈಕೋರ್ಟ್
ನವದೆಹಲಿ: ಆಮ್ ಆದ್ಮಿ ಪಕ್ಷದ ಇತ್ತೀಚಿಗಿನ ಬಂಡವಾಳ ಖಾತೆಯ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಿ ಎಂದು ದೆಹಲಿ ಹೈಕೋರ್ಟ್ ಬುಧವಾರ ಸೂಚಿಸಿದೆ.
ನ್ಯಾಯಾಮೂರ್ತಿಗಳಾದ ಪ್ರದೀಪ್ ನಂದರಾಜೋಗ್ ಮತ್ತು ವಿ.ಕೆ ರಾವ್ ಅವನ್ನೋಳಗೊಂಡ ನ್ಯಾಯಾಪೀಠ ಈ ಆದೇಶ ಹೊರಡಿಸಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಇತ್ತೀಚಿನ ಖಾತೆಯ ಬಗ್ಗೆ ಪರಿಶೀಲನೆ ನಡೆಸಿ ಡಿಸೆಂಬರ್ 10ರೊಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ.
ಇದರಲ್ಲಿ ಅಕ್ರಮ ಹಣ ಗಳಿಕೆಯಾಗಿದ್ದರೆ ಪಕ್ಷದ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಅಥವಾ ಈ ಸಂಬಂಧ ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ನ್ಯಾಯಾಪೀಠ ತಿಳಿಸಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಕಾನೂನು ಉಲ್ಲಂಘಿಸಿ, ಅಕ್ರಮವಾಗಿ ವಿದೇಶದಿಂದ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ಈ ಸಂಬಂಧ ತನಿಖೆ ಕೈಗೊಳ್ಳಬೇಕು ಎಂದು ಕೋರಿ ವಕೀಲರಾದ ಎಂ.ಎಲ್ ಶರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಈ ಆದೇಶ ಹೊರಡಿಸಿದೆ.