ಅಕ್ರಮ ಗಣಿಗಾರಿಕೆ: ಇಡಿ ವಶಕ್ಕೆ ಅಲಿಖಾನ್
ಓಎಂಸಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ..
ಬೆಂಗಳೂರು: ಓಎಂಸಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಸಹಾಯಕ ಅಲಿಖಾನ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಲಾಗಿದೆ.
ಅಕ್ರಮ ಹಣ ಗಳಿಕೆ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿ ಇಡಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್, ಅಲಿಖಾನ್ರನ್ನು ಅಕ್ಟೋಬರ್ 28ರವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.
ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಅಲಿಖಾನ್ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಳ್ಳಲಿದ್ದು, ವಿಚಾರಣೆ ಬಳಿಕ ಮತ್ತೆ ಸೋಮುವಾರ ಸಿಬಿಐ ಕೋರ್ಟ್ಗೆ ಹಾಜರು ಪಡಿಸಲಿದ್ದಾರೆ.