ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಮೂಲಾಗ್ರ ಸುಧಾರಣೆ ಸಾಧ್ಯತೆ: ಹರ್ಷವರ್ಧನ

Mainashree
Updated On : 24 Oct 2013, 5:25 am

ನವದೆಹಲಿ: ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತಂದರೆ ಆಮೂಲಾಗ್ರ ಸುಧಾರಣೆ ಸಾಧ್ಯತೆ ಎಂದು ದೆಹಲಿ ವಿಧಾನಸಭಾ ಚುನಾವಣೆಯ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಮುಖ್ಯಮಂತ್ರಿ ಅಭ್ಯರ್ಥಿ ಡಾ. ಹರ್ಷವರ್ಧನ್ ಗುರುವಾರ ಹೇಳಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದರೆ ಬುಡದಿಂದಲ್ಲೇ ಸುಧಾರಣೆ ಕಾರ್ಯ ಆರಂಭಿಸಲಾಗುವುದು. ಕಾನೂನು ಮುರಿದ ಆರೋಪಿಗಳಿಗೆ ತಕ್ಕ ಪಾಠ ಕಲಿಸಲಿದೆ ಎಂದು ಹೇಳಿದ್ದಾರೆ.

ಪಕ್ಷವನ್ನು ಗೆಲ್ಲಿಸಿದರೆ, ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕ್ರಮಕೈಗೊಂಡು, ಕಾಂಗ್ರೆಸ್‌ನ ಅಟ್ಟಹಾಸಕ್ಕೆ ಮಟ್ಟಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ.

ದೇಶದ ರಾಜಧಾನಿಯಾದ ದೆಹಲಿಯಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಹಗರಣ ಮತ್ತು ಅತ್ಯಾಚಾರವನ್ನು ಬಿಜೆಪಿ ಬುಡದಿಂದಲೇ ಕಿತ್ತೋಗೆಯಲಿದೆ. ಆದರೆ ಇದಕ್ಕೆ ಅಧಿಕಾರ ಬೇಕು. ಜನರು ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಮಾತ್ರ ಇದು ಸಾಧ್ಯ ಎಂದು ಹರ್ಷವರ್ಧನ್ ಹೇಳಿದ್ದಾರೆ.

ಡಿಸೆಂಬರ್ 4ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹರ್ಷವರ್ಧನ್ ಅವರನ್ನು ನಿನ್ನೆ ಬಿಜೆಪಿ ನಾಯಕರು ಆಯ್ಕೆ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement