ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆಂಧ್ರದಲ್ಲಿ ಭಾರಿ ಮಳೆ, 17 ಸಾವು, ನೂರಾರು ಗ್ರಾಮ ಜಲಾವೃತ

ಆಂಧ್ರಪ್ರದೇಶದಲ್ಲಿ ಸತತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.

Lingaraj Badiger
Updated On : 25 Oct 2013, 3:39 am

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸತತ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಅಲ್ಲದೆ ಮಳೆ ಸಂಬಂಧಿ ಘಟನೆಗಳಿಂದ ಈವರೆಗೆ 17 ಮಂದಿ ಮೃತಪಟ್ಟಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರದ ಹಲವು ಪ್ರದೇಶಗಳಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರೆದಿದೆ. ಹೀಗಾಗಿ ತಗ್ಗು ಪ್ರದೇಶದಲ್ಲಿರುವ ಸಾವಿರಾರು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಅಧಿಕಾರಿಗಳ ದಾಖಲೆಗಳ ಪ್ರಕಾರ, ಮಳೆ ಸಂಬಂಧಿ ಘಟನೆಗಳಿಂದ ಈವರೆಗೆ 17 ಮಂದಿ ಮೃತಪಟ್ಟಿದ್ದಾರೆ ಮತ್ತು 2.5 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಭಾರಿ ಮಳೆಯಿಂದಾಗಿ ಹಲವು ನಗರ ಮತ್ತು ಪಟ್ಟಣಗಳು ವಿಶೇಷವಾಗಿ ಕರಾವಳಿ ಆಂಧ್ರ ಮತ್ತು ರಾಯಲ್‌ಸೀಮಾದ ನೂರಾರು ಗ್ರಾಮಗಳು ಸಂಪೂರ್ಣ ಜಲಾವೃತವಾಗಿವೆ. ಮಳೆಯಿಂದಾಗಿ ನೂರಾನು ಮನೆಗಳು ಕುಸಿದು ಬಿದ್ದ ಪರಿಣಾಮ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರನ್ನು ತುರ್ತು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಗುಂಟೂರು ಜಿಲ್ಲಾಧಿಕಾರಿ ಎಸ್.ಸುರೇಶ್ ಕುಮಾರ್ ಅವರು ದೂರವಾಣಿ ಮೂಲಕ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 11 ಸಾವಿರ ಮಂದಿ ನಿರಾಶ್ರಿತರಾಗಿದ್ದು, ಅವರಿಗಾಗಿ 36 ತುರ್ತು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement