ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೆಲಂಗಾಣ ವಿವಾದ: ನಾಳೆ ಹೈದ್ರಾಬಾದ್‌ನಲ್ಲಿ ಜಗನ್ ರ್ಯಾಲಿ?

Mainashree
Updated On : 25 Oct 2013, 4:59 am

ಹೈದ್ರಾಬಾದ್: ತೆಲಂಗಾಣ ಪ್ರತ್ಯೇಕ ರಾಜ್ಯಕ್ಕೆ ವಿರೋಧಿಸಿ ಅಖಂಡ ಆಂಧ್ರ ಪ್ರದೇಶಕ್ಕಾಗಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ವೈ.ಎಸ್ ಜಗನ್ ಮೋಹನ್ ರೆಡ್ಡಿ ನಾಳೆ ಹೈದ್ರಾಬಾದ್‌ನಲ್ಲಿ ರ್ಯಾಲಿಯನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಇದೇ ತಿಂಗಳು ಅಕ್ಟೋಬರ್‌ನಲ್ಲಿ ಜಗನ ಮೋಹನ್ ರೆಡ್ಡಿ ಅವರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಮೂರು ದಿನಗಳ ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ಕರೆದೊಯ್ದು ನಂತರ ಉಪವಾಸಕ್ಕೆ ಅಂತ್ಯವಾಡಿದ್ದರು. ಇದಾದ ಬೆನ್ನಲ್ಲೇ ಜಗನ್ ನಾಳೆ ಜನತಾ ರ್ಯಾಲಿಯನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರ ಬಂದ ಮೇಲೆ ಜಗನ್ ಮೋಹನ್ ರೆಡ್ಡಿ ಅವರು, ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಸಾರ್ವಜನಿಕ ಸಭೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.

ವೈ.ಎಸ್. ರಾಜಶೇಖರ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರು ತಂದೆಯ ಅಧಿಕಾರ ಬಳಸಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಮೇಲೆ 2012ರ ಮೇ 27ರಂದು ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ಧರು.  16 ತಿಂಗಳು ಜೈಲಿನಲ್ಲಿ ಕಳೆದಿದ್ದ ಜಗನ್‌ಗೆ, ನ್ಯಾಯಾಲಯ ಸೆಪ್ಟೆಂಬರ್ ತಿಂಗಳಲ್ಲಿ ಷರತ್ತು ಬದ್ಧ ಜಾಮೀನು ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement