ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಾಳೆ ಅಸರಾಮ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಸಾಧ್ಯತೆ

ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಅಸಾರಾಂ ಬಾಪು ವಿರುದ್ಧ ನಾಳೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ...

Mainashree
Updated On : 25 Oct 2013, 2:09 am

ಜೋಧ್‌ಪುರ್: ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಅಸಾರಾಂ ಬಾಪು ವಿರುದ್ಧ ನಾಳೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣ ಸಂಬಂಧ ಶುಕ್ರವಾರ ಅಸಾರಾಂ ಅವರನ್ನು ಜೊಧ್‌ಪುರ್ ಸೆಷನ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಶನಿವಾರದವರೆಗೆ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ.

ನಾಳೆ ಜೋಧ್‌ಪುರ್ ಪೊಲೀಸರು ಸೆಷನ್ ನ್ಯಾಯಾಲಯಕ್ಕೆ ಅಸಾರಾಂ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಿದ್ದು, ಅಸಾರಾಂ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಅಕ್ರಮ ಬಂಧನ ನೀಡಿದ ಆರೋಪ ಎದುರಿಸಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಅಸಾರಾಂ ಪುತ್ರ ನಾರಾಯಣ ಸಾಯಿ ತಲೆಮರೆಸಿಕೊಂಡಿದ್ದು, ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ.
ಜೋಧ್‌ಪುರದಲ್ಲಿ ಅಸಾರಾಮ್ ಟ್ರಸ್ಟ್ ನಡೆಸುತ್ತಿರುವ ಹಾಸ್ಟೆಲ್‌ನಲ್ಲಿರುವ 15 ವರ್ಷದ ಬಾಲಕಿಯೊಬ್ಬಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಧಾರ್ಮಿಕ ಗುರು ಅಸಾರಾಮ್ ಬಾಪು ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಳು. ರಾಜಸ್ಥಾನದಲ್ಲಿ ಜೀವ ಭಯವಿದ್ದುದ್ದರಿಂದ ಇಲ್ಲಿಗೆ ಬರಬೇಕಾಯಿತು ಎಂದು ಆಕೆಯ ತಂದೆ ಹೇಳಿದ್ದರು. ದೂರು ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಪ್ರಕರಣವನ್ನು ರಾಜಸ್ಥಾನಕ್ಕೆ ವರ್ಗಾಯಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement