ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಂಗ್ರೆಸ್ ಪರ ಸಚಿನ್ ಪ್ರಚಾರ

ನಿವೃತ್ತಿ ನಂತರ ಸಚಿನ್ ರಮೇಶ್ ತೆಂಡೂಲ್ಕರ್ ಅವರು ಕಾಂಗ್ರೆಸ್ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ನಿರ್ಧರಿಸಿದ್ದು, ಇದರೊಂದಿಗೆ...

Mainashree
Updated On : 26 Oct 2013, 3:57 am

ಭೋಪಾಲ್: ನಿವೃತ್ತಿ ನಂತರ ಸಚಿನ್ ರಮೇಶ್ ತೆಂಡೂಲ್ಕರ್ ಅವರು ಕಾಂಗ್ರೆಸ್ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ನಿರ್ಧರಿಸಿದ್ದು, ಇದರೊಂದಿಗೆ ಸಕ್ರಿಯ ರಾಜಕಾರಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಹೌದು, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಸಚಿನ್ ನಿರ್ಧರಿಸಿದ್ದಾರೆಂದು ಮೂಲಗಳು ತಿಳಿಸಿವೆ. ಕ್ರಿಕೆಟ್ ದೇವರು ಎಂದೇ ಹೆಸರಾಗಿರುವು ಸಚಿನ್ ಮಧ್ಯಪ್ರದೇಶಧಲ್ಲಿ ನಡೆಯುವ 9 ಚುನಾವಣೆ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಕಾಂಗ್ರೆಸ್ ನಾಯಕ ಪ್ರಮೋದ್ ಗುಗಾಲಿಯಾ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಕಳೆದ ವರ್ಷ ಯುಪಿಎ ಸರ್ಕಾರ ಸಚಿನ್ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು. ಸಚಿನ್ ಅವರು ಪ್ರಚಾರದಲ್ಲಿ ಭಾಗವಹಿಸಲು ಕಾಂಗ್ರೆಸ್ ಒಪ್ಪಿಗೆ ನೀಡಿದೆ.

ಸಚಿನ್ ಅವರ ಪ್ರಖ್ಯಾತಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತಯಾಚನೆಗೆ ಮುಂದಾಗಿದೆ. ಮಧ್ಯಪ್ರದೇಶದಲ್ಲಿ ಸುಮಾರು 1 ಕೋಟಿ ಯುವಜನತೆ ಮತಚಲಾಯಿಸಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಮುಂದಿನ ತಿಂಗಳು ನವೆಂಬರ್ 14ರಂದು ವೆಸ್ಟ್ ಇಂಡೀಸ್ ವಿರುದ್ಧ ಸಚಿನ್ ತೆಂಡೂಲ್ಕರ್ ತಮ್ಮ ಅಂತಿಮ 200ನೇ ಟೆಸ್ಟ್ ಪಂದ್ಯವನ್ನಾಡಲಿದ್ದು, ನಿವೃತ್ತಿಹೊಂದಲ್ಲಿದ್ದಾರೆ. ನವೆಂಬರ್ 25ರಿಂದ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement