ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪಾಟ್ನಾ ಬಾಂಬ್ ಸ್ಫೋಟಕ್ಕೆ ಪ್ರಧಾನಿ ಮನಮೋಹನ್ ಸಿಂಗ್,ಮೋದಿ ಖಂಡನೆ

ಬಿಹಾರದ ಪಾಟ್ನಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಘಟನೆಯನ್ನು ಪ್ರಧಾನಿ ಮನಮೋಹನ್ ಸಿಂಗ್ ಹಾಗೂ...

Mainashree
Updated On : 27 Oct 2013, 4:44 am

ನವದೆಹಲಿ: ಬಿಹಾರದ ಪಾಟ್ನಾದಲ್ಲಿ ಭಾನುವಾರ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಘಟನೆಯನ್ನು ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಖಂಡಿಸಿದ್ದಾರೆ.

ಬಾಂಬ್ ಸ್ಫೋಟಕ್ಕೆ ವಿಷಾಧ ವ್ಯಕ್ತಪಡಿಸಿರುವ ಪ್ರಧಾನಿ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕರೆ ಮಾಡಿ, ಘಟನೆ ಬಗ್ಗೆ ಶೀಘ್ರ ತನಿಖೆ ಕೈಗೊಂಡು, ತಪ್ಪಿತಸ್ಥರನ್ನು ಶಿಕ್ಷಿಸಿ ಎಂದು ಆದೇಶಿಸಿದ್ದಾರೆ.

ಪಾಟ್ನಾದಲ್ಲಿ ಜನರು ಶಾಂತಿಯನ್ನು ಕಾಪಾಡಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.

ಇಂದು ಮೋದಿ ಅವರು ಗಾಂಧಿ ಮೈದಾನದಲ್ಲಿ ಹೂಂಕಾರ್ ರ್ಯಾಲಿಯನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಆದರೆ ಮೋದಿ ಅವರು ರ್ಯಾಲಿಗೆ ಆಗಮಿಸಿದ್ದು, ಭಾಷಣ ಮಾಡಿದ್ದಾರೆ.

ಘಟನೆ ಬಗ್ಗೆ ವಿಷಾಧ ವ್ಯಕ್ತ ಪಡಿಸಿದ ಮೋದಿ, ನಗರದಲ್ಲಿ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ 7 ಬಾಂಬ್ ಸ್ಫೋಟಗೊಂಡಿದ್ದು, ಗಾಂಧಿ ಮೈದಾನದಲ್ಲಿ 2 ಬಾಂಬ್ ಹಾಗೂ ಮೈದಾನದ ಹೊರಗೆ 3 ಬಾಂಬ್ ಸ್ಫೋಟಗೊಂಡು, 5 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement