ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನಾಧಿಕಾರಿ ಸಾವು

Vishwanath S
Updated On : 28 Oct 2013, 4:24 am

ನವದೆಹಲಿ: ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಭಾರತೀಯ ಸೇನಾ ನೆಲೆಗಳ ಮೇಲೆ ಸೋಮವಾರ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೇನಾ ಕಿರಿಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಭಾರತೀಯ ಸೇನಾ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ಮಾಡಿರುವ ಪಾಕ್ ಸೈನಿಕರು ಕಿರಿಯ ಅಧಿಕಾರಿಯೊಬ್ಬರನ್ನು ಹತ್ಯೆ ಮಾಡಿದ್ದು, ಮತ್ತೋರ್ವ ಅಧಿಕಾರಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭಾರತೀಯ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯ ಯುರ್ರಿ ಎಂಬಲ್ಲಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಪಾಕ್ ಸೈನಿಕರ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ಸಹ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಹೀಗಾಗಿ ಗಡಿ ಭಾಗದಲ್ಲಿ ಬಿಗುವಿನ ವಾತಾವರಣಾ ಸೃಷ್ಠಿಯಾಗಿದೆ.

ದಾಳಿಯ ಕುರಿತಾಗಿ ದ್ವಿಪಕ್ಷಿಯ ಮಾತುಕತೆ ನಡೆಸಲು ಸೇನಾ ಅಧಿಕಾರಿಗಳು ಇಂದು ಧ್ವಜ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಇದಕ್ಕು ಮುನ್ನ ಅಕ್ಟೋಬರ್ 18 ಮತ್ತು 20ರಂದು ಗಡಿ ಭದ್ರತಾ ಪಡೆ(ಬಿಎಸ್‌ಪಿ) ಅಧಿಕಾರಿಗಳು ನಿರ್ಧರಿಸಿದ್ದವು. ಆದರೆ ಪಾಕಿಸ್ತಾನಿ ಸೇನಾಧಿಕಾರಿಗಳು ಅಂದಿನ ಸಭೆಗೆ ಗೈರಾಗಿದ್ದರು.

ಗಡಿ ಭಾಗದಲ್ಲಿ ನಿರಂತರವಾಗಿ ಗುಂಡಿನ ದಾಳಿಗಳು ನಡೆಯುತ್ತಿರುವುದರಿಂದ ಅಲ್ಲಿನ ನಿವಾಸಿಗಳು ವಲಸೆ ಹೋಗುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಪಾಕ್ ಸೈನಿಕರು ಸುಮಾರು 130 ಬಾರಿ ಕದನ ವಿರಾಮ ಉಲ್ಲಂಘಿಸಿದ್ದಾರೆ. ಇದು ಕಳೆದ ಎಂಟು ವರ್ಷಗಳಲ್ಲೇ ಮೊದಲ ಬಾರಿಗೆ ಅತೀ ಹೆಚ್ಚಿನ ಕದನ ವಿರಾಮ ಉಲ್ಲಂಘನೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement