ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಮೈಕ್ಯ ಆಂಧ್ರ ಪ್ರತಿಭಟನೆ: ಇಬ್ಬರ ಆತ್ಮಾಹುತಿ

ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿರೋಧಿ ಹೋರಾಟ ತಾರಕಕ್ಕೇರಿದ್ದು, ಸಮೈಕ್ಯ ಆಂಧ್ರ ಹೋರಾಟವನ್ನು ಬೆಂಬಲಸಿ ಇಬ್ಬರು ಪ್ರತಿಭಟನಾಕಾರರು ಆತ್ಮಾಹುತಿ ಮಾಡಿಕೊಂಡಿದ್ದಾರೆ.

Srinivasa Murthy VN
Updated On : 2 Sept 2013, 3:54 am

ಅನಂತಪುರ: ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ ವಿರೋಧಿ ಹೋರಾಟ ತಾರಕಕ್ಕೇರಿದ್ದು, ಸಮೈಕ್ಯ ಆಂಧ್ರ ಹೋರಾಟವನ್ನು ಬೆಂಬಲಸಿ ಇಬ್ಬರು ಪ್ರತಿಭಟನಾಕಾರರು ಆತ್ಮಾಹುತಿ ಮಾಡಿಕೊಂಡಿದ್ದಾರೆ.

ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದ್ದು, ಚಿತ್ತೂರು ಮತ್ತು ಕಡಪ ಜಿಲ್ಲೆಗಳಲ್ಲಿ ಇಬ್ಬರು ಪ್ರತಿಭಟನಾಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೀಡಾದವರು ಚಿತ್ತೂರಿನ ಕೆ.ರಾಜಾ(42) ಮತ್ತು ಕಡಪ ಜಿಲ್ಲೆಯ ಸಾಂಬಯ್ಯ ಎಂದು ತಿಳಿದು ಬಂದಿದೆ.

ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿ ಇಂದು ಚಿತ್ತೂರಿನ ಕುಪ್ಪಂ ಪಟ್ಟಣದ ಪ್ರಮುಖ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕೆ.ರಾಜಾ ಎಂಬ ವ್ಯಕ್ತಿ ಸಮೈಕ್ಯ ಆಂಧ್ರದ ಪರವಾಗಿ ಘೋಷಣೆಗಳನ್ನು ಕೂಗುತ್ತಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ಕುಪ್ಪಂ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ತಿರುಪತಿಗೆ ಸಾಗಿಸುವಾಗ ಆತ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಅಂತೆಯೇ ಮತ್ತೊಂದು ಪ್ರಕರಣದಲ್ಲಿ ಕಡಪ ಜಿಲ್ಲೆಯೆ ಸಾಂಬಯ್ಯ ಎಂಬ ವ್ಯಕ್ತಿ ಆಂಧ್ರ ವಿಭಜನೆಯಿಂದಾಗಿ ತೀವ್ರ ಮನನೊಂದು, ಕೃಷಿಗೆ ಬಳಸಲಾಗುವ ಕ್ರಿಮಿನಾಶಕವನ್ನು ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪ್ರತಿಭಟನಾಕಾರರ ಆತ್ಮಾಹುತಿ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪ್ರತಿಭಟನೆ ಮತ್ತಷ್ಟು ಜೋರಾಗಿದೆ. ಅನಂತಪುರ, ವಿಜಯವಾಡ, ಕಡಪ, ಕರ್ನೂಲು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.

ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಂಧ್ರಪ್ರದೇಶ ಸಾರಿಗೆ ಬಸ್‌ಗಳನ್ನು ಪ್ರತಿಭಟನಾಕಾರರು ತಡೆದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ ಅಲ್ಲಲ್ಲಿ ಕಲ್ಲು ತೂರಾಟ ನಡೆಸಿದ ಕುರಿತು ಮಾಹಿತಿಗಳು ಲಭ್ಯವಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement