ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಕಡ್ಡಾಯ: ದೇಶಪಾಂಡೆ
ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ರಾಜ್ಯದ ಪದವಿ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಅಳವಡಿಸುವುದನ್ನು ಕಡ್ಡಾಯಗೊಳಿ..
ಬೆಂಗಳೂರು: ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ರಾಜ್ಯದ ಪದವಿ ಕಾಲೇಜುಗಳಲ್ಲಿ ಬಯೋ ಮೆಟ್ರಿಕ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ಮಂಗಳವಾರ ಹೇಳಿದ್ದಾರೆ.
ಈ ಹಿಂದೆಯೂ ಬಯೋ ಮೆಟ್ರಿಕ್ ಕಡ್ಡಾಯಗೊಳಿಸುವ ಚಿಂತನೆ ಇತ್ತು. ಆದರೆ ಅದು ಜಾರಿಗೆ ಬಂದಿರಲಿಲ್ಲ. ಈಗ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ನು ಮುಂದೆ ಬಯೋ ಮೆಟ್ರಿಕ್ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಪ್ರವಾಸೋದ್ಯಮ ಖಾತೆಯ ಸಚಿವರೂ ಆಗಿರುವ ದೇಶಪಾಂಡೆ ಅವರು, ಶೂಟಿಂಗ್‌ನಿಂದ ಪಾರಂಪರಿಕ ತಾಣಗಳಿಗೆ ಧಕ್ಕೆಯಾಗುತ್ತಿದೆ. ಹೀಗಾಗಿ ಕೆಲವು ಕಡೆ ಶೂಟಿಂಗ್ ಕಡಿವಾಣ ಹಾಕುವ ಚಿಂತನೆ ನಡೆದಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.