ಮುಂಬೈ ಕಾಮುಕರ ವಿರುದ್ಧ ಮತ್ತೊಂದು ರೇಪ್ ಕೇಸ್ ದಾಖಲು
ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರ ಮೇಲೆ ಮಂಗಳವಾರ ಮತ್ತೊಂದು..
ಮುಂಬೈ: ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರ ಮೇಲೆ ಮಂಗಳವಾರ ಮತ್ತೊಂದು ರೇಪ್ ಕೇಸ್ ದಾಖಲಿಸಲಾಗಿದೆ.
ಇಂದು ಯುವತಿಯೊಬ್ಬಳು ಪತ್ರಿಕಾ ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳೇ ತನ್ನ ಮೇಲೂ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಆರೋಪಿಗಳ ಗುರುತು ಪತ್ತೆಗೆ ಮುಂದಾಗಿದ್ದಾರೆ.
ಪತ್ರಿಕಾ ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ಎಸಗಿದ ಐವರು ಆರೋಪಿಗಳಲ್ಲಿ ಮೂವರು ತನ್ನ ಮೇಲೂ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರಿದ್ದಾಳೆ. ಈ ಕಾಮುಕರು ಕಳೆದ ಆರು ತಿಂಗಳಲ್ಲಿ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿರುವುದಾಗಿ ಈ ಮುಂಚೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದರು. ಅದು ಈಗ ನಿಜವಾಗುತ್ತಿದೆ.