ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಟ್ಟೆ ಸತ್ಯನಾರಾಯಣ ಬೆಂಗಳೂರು ಮೇಯರ್

ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಸತ್ಯ ನಾರಾಯಣ ಕಟ್ಟೆ ಅವರು ಬುಧವಾರ ಅವಿರೋಧವಾಗಿ...

Vishwanath S
Updated On : 4 Sept 2013, 11:42 am

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ಸತ್ಯ ನಾರಾಯಣ ಕಟ್ಟೆ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಸವನಗುಡಿ ವಾರ್ಡ್‌ನ ಕಾರ್ಪೋರೇಟರ್ ಆಗಿದ್ದ ಸತ್ಯನಾರಾಯಣ ಕಟ್ಟೆ ಅವರು ನಾಲ್ಕು ಬಾರಿ ಸದಸ್ಯರಾಗಿ ಗೆದ್ದು ಬಂದಿದ್ದರು. ಉಪಮೇಯರ್ ಆಗಿ ಬ್ಯಾಟರಾಯನಪುರ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎನ್. ಇಂದಿರಾ ಅವರು ಆಯ್ಕೆಗೊಂಡಿದ್ದಾರೆ.

ಉಪ ಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಲಾಗಿತ್ತು. ಹೀಗಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ರೇಸ್‌ನಲ್ಲಿ ಇಲ್ಲದ ಕಾರಣ ಇಂದಿರಾ ಅವರು ಉಪಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.

ಮೇಯರ್ ಹಾಗೂ ಉಪಮೇಯರ್ ಸ್ಥಾನ ಮೀಸಲಾತಿ ವಿವಾದ  ಹೈಕೋರ್ಟ್‌ನ ಮೆಟ್ಟಿಲೇರಿತ್ತು. ಕೋರ್ಟ್ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಸ್ಥಾನವನ್ನು ಪರಿಶಿಷ್ಟ ಪಂಗಡಕ್ಕೆ ಮೀಸಲಿರುಸುವಂತೆ ಆದೇಶಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement