ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಗರಾಭಿವೃದ್ಧಿ ಮತ್ತು ಮೂಲಸೌರ್ಕಯಕ್ಕೆ ಆದ್ಯತೆ: ಮೇಯರ್

ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಕಟ್ಟೆ ಸತ್ಯನಾರಾಯಣ ಅವರು ಬೆಂಗಳೂರು...

Vishwanath S
Updated On : 4 Sept 2013, 3:29 am

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಕಟ್ಟೆ ಸತ್ಯನಾರಾಯಣ ಅವರು ಬೆಂಗಳೂರು ಅಭಿವೃದ್ಧಿ ಕುರಿತಂತೆ ಬುಧವಾರ ಹಲವಾರು ಭರವಸೆಗಳನ್ನು ನೀಡಿದ್ದಾರೆ.

ನೂತನ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಅಭಿವೃದ್ಧಿ, ನಗರಕ್ಕೆ ಮೂಲಸೌಕರ್ಯ ಕಲ್ಪಿಸಲು ಸೂಕ್ತ ಕ್ರಮ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಗುಂಡಿ ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ, ರಸ್ತೆ ಡಾಂಬರೀಕರಣ ಸೇರಿ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇದ್ದರೆ ಅಂತಹ ಅಧಿಕಾರಿಗಳಿಗೆ ಚಾಟಿ ಬೀಸಿ ಕೆಲಸ ಮಾಡಿಸುತ್ತೇವೆ. ಅಲ್ಲದೆ ಅಶಿಸ್ತಿನ ಅಧಿಕಾರಿಗಳು ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಅಭಿವೃದ್ಧಿಗೆ ಅಗತ್ಯ ಬಿದ್ದರೆ ಪೂರಕ ಬಜೆಟ್ ಮಂಡನೆ ಮಾಡಲಾಗುವುದು. ನಗರವನ್ನು ನೈರ್ಮಲ್ಯ ಹಾಗೂ ಕಸಮುಕ್ತ ನಗರವನ್ನಾಗಿ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಲ್ಲದೆ ಭಾರಿ ಪ್ರಮಾಣದಲ್ಲಿ ತ್ಯಾಜ್ಯ ಸಂಗ್ರಹವಾಗುವ ಕೆ.ಆರ್. ಮಾರುಕಟ್ಟೆಗೆ ಪ್ರತಿ ಸೋಮವಾರ ಭೇಟಿ ನೀಡಿ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ  ಗಮನ ಹರಿಸಲಾಗುವುದು ಎಂದು ಮೇಯರ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement