ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿಖ್ ನರಮೇಧ: ಸೋನಿಯಾಗೆ ನ್ಯೂರ್ಯಾರ್ಕ್ ಕೋರ್ಟ್ ಸಮನ್ಸ್

1984ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Srinivasa Murthy VN
Updated On : 4 Sept 2013, 6:09 am

ನ್ಯೂಯಾರ್ಕ್: 1984ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

1984ರ ಸಿಖ್ ದಂಗೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರು ತಪ್ಪಿತಸ್ಥರ ರಕ್ಷಣೆಗೆ ಮುಂದಾಗಿದ್ದರು ಎಂದು ಆರೋಪಿಸಿ 'ಸಿಖ್ ಫಾರ್ ಜಸ್ಟೀಸ್‌'(ಎಸ್‌ಎಫ್‌ಜೆ) ಎಂಬ ಮಾನವ ಹಕ್ಕು ಸಂಘಟನೆ ನ್ಯೂಯಾರ್ಕ್ ನ್ಯಾಯಾಲಯದಲ್ಲಿ ದೂರು ಸಲ್ಲಿಸಿತ್ತು. ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಎಸ್‌ಎಫ್‌ಜೆ ಸಂಘಟನೆ ಸಲ್ಲಿಸಿರುವ ದೂರಿನಲ್ಲಿ 1984ರ ನವೆಂಬರ್ 1 ಮತ್ತು 4 ರಂದು ಸುಮಾರು 30 ಸಾವಿರಕ್ಕೂ ಅಧಿಕ ಸಿಖ್ ಧರ್ಮೀಯರ ವಿರುದ್ಧ ಕಾಂಗ್ರೆಸ್ ನೇತೃತ್ವದ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ದಾಳಿ ನಡೆಸಿತ್ತು. ದಾಳಿ ವೇಳೆ ಸಾವಿರಾರು ಸಿಖ್ ಧರ್ಮೀಯರ ಮಾನ ಮತ್ತು ಪ್ರಾಣ ಹರಣವಾಗಿತ್ತು. ಕಾಂಗ್ರೆಸ್ ಸರ್ಕಾರದ ಅಂದಿನ ದಾಳಿಯಲ್ಲಿ ಪಕ್ಷದ ಪ್ರಮುಖರಾದ ಸೋನಿಯಾ ಗಾಂಧಿ ಸೇರಿದಂತೆ ಜಗದೀಶ್ ಟೈಟ್ಲರ್, ಕಮಲ್‌ನಾಥ್, ಸಜ್ಜನ್ ಕುಮಾರ್ ಸೇರಿದಂತೆ ಹಲವು ಮುಖಂಡರು ನೇರವಾಗಿ ಭಾಗಿಯಾಗಿದ್ದರು ಎಂದು ದೂರು ದಾಖಲಿಸಲಾಗಿದೆ.

ಅಲ್ಲದೆ ದಂಗೆಯಲ್ಲಿ ಸೋನಿಯಾ ಗಾಂಧಿ ಅವರ ಕೈವಾಡವೂ ಇದೆ ಎಂದು ಎಸ್‌ಎಫ್‌ಜೆ ಆರೋಪಿಸಿದೆ. ಸೋನಿಯಾ ಗಾಂಧಿ ಅವರು ಪ್ರಸ್ತುತ ಅನಾರೋಗ್ಯ ನಿಮಿತ್ತ ಅಮೆರಿಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement