ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗೀತಿಕಾ ಶರ್ಮಾ ಆತ್ಮಹತ್ಯೆ: ಕಾಂಡಾಗೆ ಮಧ್ಯಂತರ ಜಾಮೀನು

ಗಗನ ಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕಣರ ಸಂಬಂಧ ಜೈಲು ಪಾಲಾಗಿದ್ದ ಹರಿಯಾಣ ಮಾಜಿ ಸಚಿವ ಗೋಪಾಲ್ ...

Vishwanath S
Updated On : 5 Sept 2013, 2:26 am

ನವದೆಹಲಿ: ಗಗನ ಸಖಿ ಗೀತಿಕಾ ಶರ್ಮಾ ಆತ್ಮಹತ್ಯೆ ಪ್ರಕಣರ ಸಂಬಂಧ ಜೈಲು ಪಾಲಾಗಿದ್ದ ಹರಿಯಾಣ ಮಾಜಿ ಸಚಿವ ಗೋಪಾಲ್ ಕಾಂಡಾಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಕಾಂಡಾ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಇಂದು ಕಾಂಡಾ ಅವರಿಗೆ ಅಕ್ಟೋಬರ್ 4ರವರೆಗೆ ಮಧ್ಯಂತರ ಜಾಮೀನು ನೀಡಿದೆ.

ನಾಳೆಯಿಂದ ಪ್ರಾರಂಭವಾಗುವ ಹರಿಯಾಣ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಒಂದು ತಿಂಗಳವರೆಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಅಂದರೆ ಅಕ್ಟೋಬರ್ 4ರ ನಂತರ ಕೋರ್ಟ್‌ಗೆ ಖುದ್ದು ಹಾಜರಾಗಬೇಕೆಂದು ಸೂಚಿಸಿದೆ.

ಎಂಡಿಎಲ್‌ಆರ್ ವಿಮಾನ ಸಂಸ್ಥೆಯ ಮುಖ್ಯಸ್ಥರಾಗಿದ್ದ ಮಾಜಿ ಸಚಿವ ಗೋಪಾಲ್ ಕಾಂಡಾ ಅವರ ಸಂಸ್ಥೆಯಲ್ಲಿ ಗೀತಿಕಾ ಶರ್ಮಾ ಗಗನ ಸಖಿಯಾಗಿದ್ದರು. ಆದರೆ ಗೀತಿಕಾ ಶರ್ಮಾರಿಗೆ ಕಾಂಡಾ ಅವರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರಿಂದ ಮನನೊಂದ್ದು ದೆಹಲಿಯ ಅಶೋಕ ವಿಹಾರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಲ್ಲದೆ ಆತ್ಮಹತ್ಯೆಗೂ ಮುನ್ನ ತಮ್ಮ ಸಾವಿಗೆ  ಗೋಪಾಲ್ ಕಾಂಡಾ ಅವರೇ ಕಾರಣ ಎಂದು ಪತ್ರ ಬರೆದಿಟ್ಟಿದ್ದರು. ಈ ಪತ್ರದ ಆಧಾರದ ಮೇಲೆ ದೆಹಲಿ ಪೊಲೀಸರು ಕಾಂಡಾರನ್ನು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement