2014ರ 'ಕೈ' ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಉತ್ತಮ ಆಯ್ಕೆ : ಪ್ರಧಾನಿ
2014ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆಯ್ಕೆ...
ನವದೆಹಲಿ: 2014ರ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆಯ್ಕೆ ಉತ್ತಮವಾಗಿರುತ್ತದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಸಿಂಗ್ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಪ್ರಧಾನಿ ಸ್ಧಾನಕ್ಕೆ ಯೋಗ್ಯವಾದ ವ್ಯಕ್ತಿ ಎಂದರೆ ಅದು
ರಾಹುಲ್ ಗಾಂಧಿ ಎಂದರು. ಇದೇ ವೇಳೆ, ರಾಹುಲ್ ಅವರು ಪ್ರಧಾನಿ ಆದರೆ ಅವರ ನಾಯಕತ್ವದಲ್ಲಿ ಅವರ ಆಶಯದಂತೆ ಅವರ ಕೈ ಕೆಳಗೆ ಕೆಲಸ ಮಾಡಲು ನನಗೆ ಸಂತೋಷವಿದೆ.
ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಆಯ್ಕೆ 'ಆದರ್ಶ ಆಯ್ಕೆ' ಎಂದು ನಾನು ಭಾವಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಅವರ ಈ ಹೇಳಿಕೆಯೊಂದಿಗೆ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಪ್ರಧಾನಿ ಅಭ್ಯರ್ಥಿ ಆಯ್ಕೆ ಕುರಿತಂತ ಗೊಂದಲಗಳಿಗೆ ತೆರೆ ಎಳೆದಂತಾಗಿದೆ. ಕಾಂಗ್ರೆಸ್ನಲ್ಲಿ ಚುನಾವಣೆಗೂ ಮುನ್ನ ಅಭ್ಯರ್ಥಿಗಳ ಹೆಸರನ್ನು ಬಹಿರಂಗ ಪಡಿಸಿ ಚುನಾವಣೆ ಅಖಾಡಕ್ಕೆ ಇಳಿಸುವ ಪದ್ದತಿ ಇಲ್ಲ. ಆದರೆ ಪ್ರಧಾನಿ ಅವರ ಹೇಳಿಕೆ ನೋಡಿದರೆ ಪರೋಕ್ಷ ಒತ್ತಡಗಳಿಗೆ ಮಣಿದು ಅವರು ಈ ರೀತಿ ಹೇಳಿಕೆ ನೀಡಿರಬಹುದೆಂದು ರಾಜಕೀಯ ವಲಯದಲ್ಲಿ ಮಾತುಗಳು ಕೇಳಿ ಬರುತ್ತದೆ.