ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ರಾಷ್ಟ್ರಪತಿ

Lingaraj Badiger
Updated On : 8 Sept 2013, 5:33 am

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಭಾನುವಾರ ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ್ದಾರೆ.

ದೇಶದ ಜನತೆ ಸಂತೋಷ ಮತ್ತು ಸಾಮರಸ್ಯದಿಂದ ಬಾಳಲಿ ಎಂದು ಆಶಿಸಿರುವ ಪ್ರಣಬ್ ಮುಖರ್ಜಿ, ಉತ್ತಮ ದೇಶ ಕಟ್ಟಲು ಜನತೆ ಹೊಸ ಹೊಸ ಪ್ರಯತ್ನಗಳಲ್ಲಿ ತೊಡಗಲಿ ಎಂದಿದ್ದಾರೆ.

10 ದಿನಗಳ ಗಣೇಶೋತ್ಸವ ಸೋಮವಾರದಿಂದ ಆರಂಭವಾಗಲಿದ್ದು, ಭಾರತೀಯರಲ್ಲಿ ಸ್ವಾತಂತ್ರ್ಯ ಹೋರಾಟದ ಅರಿವು ಮೂಡಿಸುವ ಉದ್ದೇಶದಿಂದ ಬಾಲಗಂಗಾಧರ ತಿಲಕ್ ಅವರು ಸಾರ್ವಜನಿಕ ಗಣೇಶೋತ್ಸವದ ಪರಿಕಲ್ಪನೆಯನ್ನು ಹುಟ್ಟುಹಾಕಿದರು. ಇಂದಿಗೂ ಅದೇ ಸೌಹಾರ್ದತೆ, ಸಮನ್ವಯತೆಯಿಂದ ಈ ಉತ್ಸವನ್ನು ಆಚರಿಸಲಾಗುತ್ತದೆ ಎಂದು ರಾಷ್ಟ್ರಪತಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement