ಜ್ಞಾನಭಾರತಿ ಗ್ಯಾಂಗ್‌ರೇಪ್: ನಾಪತ್ತೆಯಾಗಿದ್ದ ಆರೋಪಿ ಅಂದರ್
ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ..
ಬೆಂಗಳೂರು: ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ಮೊದಲನೇ ಆರೋಪಿಯನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.
ಕಳೆದ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ರಾಜಾ ಅಲಿಯಾಸ್ ಮುತ್ತುರಾಜನನ್ನು ಇಂದು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
ಮುತ್ತುರಾಜ ಸೇರಿದಂತೆ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲೆ ಎಂಟು ಮಂದಿ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಪ್ರಕರಣದ ಏಳು ಅಪರಾಧಿಗಳಿಗೆ ಕಳೆದ ಸೋಮುವಾರ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ ಮೊದಲನೇ ಆರೋಪಿಯಾಗಿದ್ದ ಈ ರಾಜಾ ನಾಪತ್ತೆಯಾಗಿದ್ದಾನೆ ಎಂದು ತನಿಖಾ ಅಧಿಕಾರಿಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರು.
2012ರ ಅಕ್ಟೋಬರ್ 13ರಂದು ಜ್ಞಾನಭಾರತಿ ಆವರಣದಲ್ಲಿ ರಾತ್ರಿ ಪ್ರಿಯಕರನೊಂದಿಗೆ ಕಾರಿನಲ್ಲಿ ಮಾತನಾಡಿಕೊಂಡು ಕುಳಿತಿದ್ದಾಗ ಬಂದೆರಗಿದ 8 ಮಂದಿ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರು.