ಸ್ವದೇಶಕ್ಕೆ ಮರಳಿದ ಸೋನಿಯಾ
ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಸ್ವದೇಶಕ್ಕೆ ವಾಪಸಾಗಿದ್ದಾರೆ.
ನವದೆಹಲಿ: ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಸ್ವದೇಶಕ್ಕೆ ವಾಪಸಾಗಿದ್ದಾರೆ.
ಸೋನಿಯಾ ಅವರು ಇಂದು ಬೆಳಗಿನ ಜಾವ ದೆಹಲಿಗೆ ಆಗಮಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಅವರು ಕಳೆದ ಸೆಪ್ಟೆಂಬರ್ 2ರಂದು ತಮ್ಮ ಪುತ್ರಿ ಪ್ರಿಯಾಂಕಾ ಅವರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದರು.
ಆಗಸ್ಟ್ 28ರಂದು ಲೋಕಸಭೆಯಲ್ಲಿ ಆಹಾರ ಭದ್ರತಾ ಮಸೂದೆ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆಯೇ ಎದೆ ನೋವು ಕಾಣಿಸಿಕೊಂಡಿದ್ದರಿಂದ ಮತದಾನಕ್ಕೂ ಮೊದಲೇ ಸದನದಿಂದ ಹೊರ ನಡೆದಿದ್ದರು. ನಂತರ ಅವರನ್ನು ನೇರವಾಗಿ ಎಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ಗಂಟೆಗಳ ನಂತರ ಸೋನಿಯಾ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಿಕೊಡಲಾಗಿತ್ತು. ಬಳಿಕ ಅವರು ಆರೋಗ್ಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದರು.