ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐಟಿ ಸಂಚಲನ: ಕೃಷ್ಣಯ್ಯ ಶೆಟ್ಟಿ, ಶ್ರೀಕಾಂತ್‌ದಾಸ್ ಮನೆ ಮೇಲೆ ದಾಳಿ

ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಅವರ ಸಹೋದರ ಶ್ರೀಕಾಂತ್‌ದಾಸ್ ಅವರ ನಿವಾಸದ ಮೇಲೆ..

Lingaraj Badiger
Updated On : 12 Sept 2013, 7:39 am

ಬೆಂಗಳೂರು: ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಅವರ ಸಹೋದರ ಶ್ರೀಕಾಂತ್‌ದಾಸ್ ಅವರ ನಿವಾಸದ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ರಾಮದಾಸ್ ಅವರ ಸಹೋದರ ಶ್ರೀಕಾಂತ್ ಅವರ ಕಚೇರಿ ಹಾಗೂ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಮನೆ ಮೇಲೂ ದಾಳಿ
ಐಟಿ ಅಧಿಕಾರಿಗಳು ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರ ಮಲ್ಲೇಶ್ವರಂ ನಿವಾಸದ ಮೇಲೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಿದ್ದು, ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ತಪಾಸಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement