ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮುಂದಿನ ವಾರ ಮುಜಾಫರ್‌ನಗರಕ್ಕೆ ಸೋನಿಯಾ, ರಾಹುಲ್ ಭೇಟಿ

ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಮುಜಾಫರ್‌ನಗರ ಜಿಲ್ಲೆಗೆ ಮುಂದಿನ ವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

Lingaraj Badiger
Updated On : 12 Sept 2013, 2:11 am

ಮುಜಾಫರ್‌ನಗರ: ಉತ್ತರ ಪ್ರದೇಶದ ಹಿಂಸಾಚಾರ ಪೀಡಿತ ಮುಜಾಫರ್‌ನಗರ ಜಿಲ್ಲೆಗೆ ಮುಂದಿನ ವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ.

ಮುಂದಿನ ವಾರ ಕೋಮುಗಲಭೆ ಪೀಡಿತ ಮುಜಾಫರ್‌ನಗರಕ್ಕೆ ಸೋನಿಯಾ ಹಾಗೂ ರಾಹುಲ್ ಗಾಂಧಿ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಪ್ರದೇಶ ಉಸ್ತುವಾರಿ ಮಧುಸೂದನ್ ಮಿಸ್ತ್ರಿ ಅವರು ಗುರುವಾರ ವರದಿಗಾರರಿಗೆ ತಿಳಿಸಿದ್ದಾರೆ.

ಮುಜಾಫರ್‌ನಗರ ಕೋಮುಗಲಭೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ ಮಿಸ್ತ್ರಿ, ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಅವಕಾಶ ನೀಡಬಾರದು ಎಂದರು. ಅಲ್ಲದೆ ಕೋಮುಗಲಭೆಯ ಹಿಂದೆ ಗುಜರಾತ್ ಬಿಜೆಪಿ ಕಾರ್ಯಕರ್ತರ ಕೈವಾಡ ಇದೆ ಎಂದು ಆರೋಪಿಸಿದರು.

ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮಿಸ್ತ್ರಿ, ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಹಲವು ನಿಯಮಗಳಿವೆ. ಆದರೆ ಸದ್ಯಕ್ಕೆ ಅಂತಹ ಯಾವುದೇ ಯೋಚನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಮಿಸ್ತ್ರಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement