ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೋದಿಗೆ ಪಟ್ಟ: ಅಸಮಾಧಾನ ವ್ಯಕ್ತಪಡಿಸಿದ ಆಡ್ವಾಣಿ

ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಮಾಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Vishwanath S
Updated On : 13 Sept 2013, 8:38 am

ನವದೆಹಲಿ: ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಮಾಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಎಲ್.ಕೆ ಆಡ್ವಾಣಿ ಅವರು ಶುಕ್ರವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯ ಬಿಜೆಪಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮೋದಿ ಅವರ ಆಯ್ಕೆಯನ್ನು ವಿರೋಧಿಸಿರುವ ಆಡ್ವಾಣಿ ಅವರು, ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆಯುವುದರ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಾಜನಾಥ್ ಸಿಂಗ್ ಅವರ ಕಾರ್ಯವೈಖರಿ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದು, ರಾಜನಾಥ್ ಸಿಂಗ್ ತಮ್ಮ ವೈಯಕ್ತಿಕ ಉದ್ದೇಶಕ್ಕಾಗಿ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಿರಿಯ ನಾಯಕರ ವಿರೋಧದ ನಡುವೆಯೂ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸಂಸದೀಯ ಸಭೆಯಲ್ಲಿ ಭಾಗವಹಿಸಿ ಸಂಸದೀಯ ಸದಸ್ಯರ ಮುಂದೆ ತಮ್ಮ ಅಭಿಪ್ರಾಯವನ್ನು ತಿಳಿಸಬೇಕೆಂದಿದ್ದೆ. ಆದರೆ ಪಕ್ಷದ ಅಧ್ಯಕ್ಷರಾಗಿರುವ ರಾಜನಾಥ್ ಸಿಂಗ್ ಅವರು ಯಾರ ಮಾತನ್ನು ಕೇಳುವ ಮನಸ್ಥಿತಿಯಲ್ಲಿ ಇಲ್ಲದ ಕಾರಣ ನಾನು ಸಂಸದೀಯ ಮಂಡಳಿಗೆ ಗೈರಾಗುವುದೇ ಸೂಕ್ತವೆನಿಸಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement